• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷ: ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಹೆಚ್​ಡಿಕೆ ಮನವಿ

Sambrama Prabha News by Sambrama Prabha News
February 4, 2026
in Politics
0
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷ: ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಹೆಚ್​ಡಿಕೆ ಮನವಿ

Updated By: Priyalachhi

ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿ ವೇಳೆ ಕುಮಾರಸ್ವಾಮಿ ಅವರು, ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಹಾಗೂ ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಚರ್ಚಿಸಿದರು.

ಶಾಶ್ವತ ಪರಿಹಾರಕ್ಕೆ ಆಗ್ರಹ: ವನ್ಯಜೀವಿಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನು ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಭೂಪೇಂದ್ರ ಯಾದವ್‌ ಅವರನ್ನು ವಿನಂತಿಸಿದರು.

ತುರ್ತು ಗಮನ ಹರಿಸುವ ಭರವಸೆ: ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಬಗ್ಗೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಅದಕ್ಕೆ ಪೂರಕವಾದ ಎಲ್ಲಾ ಮಾಹಿತಿಯನ್ನು ಸಚಿವ ಕುಮಾರಸ್ವಾಮಿ ಅವರಿಂದ ಪಡೆದುಕೊಂಡರು. ಅಲ್ಲದೆ, ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ನಿರ್ದೇಶನ ನೀಡಿದರು.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನ ಮುಗಿಯುವುದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್‌ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ಕೊಟ್ಟರು.

Tags: ಹೆಚ್‌ಡಿಕೆ
Previous Post

ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಸರ್ಕಾರ ಬಿಡುಗಡೆ ಮಾಡಬೇಕಾದ ಅನುದಾನದಲ್ಲೂ ಕಮಿಷನ್

Next Post

ರಾಜೀನಾಮೆ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

Next Post
ರಾಜೀನಾಮೆ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

ರಾಜೀನಾಮೆ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.