BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

ನಯನತಾರಾ, ಹುಮಾ ಖುರೇಷಿ ಮತ್ತು ಕಿಯಾರಾ ಅಡ್ವಾಣಿ ಬೆನ್ನಲ್ಲೇ ಟಾಕ್ಸಿಕ್’​ಗೆ ಮತ್ತೋರ್ವ ಬ್ಯೂಟಿ

Author Picture
Published On: January 3, 2026

—Advertisement—

Updated By: Priyalachhi 

ಬಾಲಿವುಡ್​​​ ಬ್ಯೂಟಿ ತಾರಾ ಸುತಾರಿಯಾ (Tara Sutaria) ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಎಂಬ ಅದ್ಭುತ ಲೋಕಕ್ಕೆ ಕಾಲಿಟ್ಟಿದ್ದಾರೆ. ಈ ಬಹುನಿರೀಕ್ಷಿತ ಚಿತ್ರದಿಂದ ಹಿಂದಿ ನಟಿ-ಗಾಯಕಿಯ ಮೊದಲ ಪೋಸ್ಟರ್ ಅನಾವರಣಗೊಂಡಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಸಿನಿಪ್ರಿಯರಲ್ಲಿ ಸಂಚಲನ ಮೂಡಿಸಿದೆ. ಸ್ಯಾಂಡಲ್​ವುಡ್​​ ರಾಕಿಂಗ್​ ಸ್ಟಾರ್ ಯಶ್ ನಾಯಕನಾಗಿ ನಟಿಸಿರುವ ‘ಟಾಕ್ಸಿಕ್’, ಈ ಸಾಲಿನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದು, ನಟಿಮಣಿಯರ ಪೋಸ್ಟರ್ಸ್ ಸೋಷಿಯಲ್​ ಮೀಡಿಯಾದಲ್ಲಿ ಬಿರುಗಾಳಿಯೆಬ್ಬಿಸುತ್ತಿದೆ.

ತಮ್ಮ ಅಫೀಶಿಯಲ್​​ ಸೋಷಿಯಲ್​ ಮೀಡಿಯಾ ಪ್ಲ್ಯಾಟ್​ಫಾರ್ಮ್​​​ಗಳಲ್ಲಿ ತಾರಾ ಸುತಾರಿಯಾ ಪೋಸ್ಟರ್​ ಹಂಚಿಕೊಂಡ ಯಶ್​, ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದಿಂದ ತಾರಾ ಸುತಾರಿಯಾ ಅವರನ್ನು ರೆಬೆಕಾ ಪಾತ್ರದಲ್ಲಿ ಪರಿಚಯಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಪಿಸ್ತೂಲ್​​ ಹಿಡಿದು ಸಖತ್​ ಸ್ಟನ್ನಿಂಗ್​ ಲುಕ್​ನಲ್ಲಿ ತಾರಾ ಸುತಾರಿಯಾ ಕಾಣಿಸಿಕೊಂಡಿದ್ದಾರೆ.

2023ರ ಜೂನ್​​ನಲ್ಲಿ ಹೆಂಡತಿ, ಮಕ್ಕಳೊಂದಿಗೆ ಮೈಸೂರಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದ ನಟ ಯಶ್​ ಅವರಿಗೆ ಬಾಲಿವುಡ್​​ಗೆ ಹೋಗುತ್ತೀರಾ? ಎಂದು ಮಾಧ್ಯಮದವರಿಂದ ಪ್ರಶ್ನೆ ಎದುರಾಗಿತ್ತು. ಅದಕ್ಕೆ ಯಶ್, ”ನಾನು ಇರುವ ಕಡೆ ಎಲ್ಲರನ್ನೂ ಕರೆಸಿಕೊಳ್ಳುತ್ತೇನೆ. ನಾನು ಎಲ್ಲೂ ಹೋಗಲ್ಲ, ಡೋಂಟ್ ವರಿ” ಎಂದು ತಿಳಿಸಿದ್ದರು. ಅದರಂತೆ ಇದೀಗ ತಮ್ಮ ಟಾಕ್ಸಿಕ್​ ಚಿತ್ರದಿಂದ ಬಹುಭಾಷಾ ನಟಿಯರ ಪಾತ್ರಗಳನ್ನು ಪರಿಚಯಿಸುತ್ತಿದ್ದಾರೆ. ಈ ಹಿನ್ನೆಲೆ, ‘ಯಶ್ ತಮ್ಮ ಮಾತಿಗೆ ಬದ್ಧ’ ಎಂಬ ಅಭಿಪ್ರಾಯಗಳು ಸೋಷಿಯಲ್​ ಮೀಡಿಯಾದಲ್ಲಿ ವ್ಯಕ್ತವಾಗುತ್ತಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp