BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರಿಂದ ಐ ಆಮ್ ಕಾಕ್ರೋಚ್ ಟೀ ಶರ್ಟ್ ಬಿಡುಗಡೆ

Author Picture
Published On: May 21, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಗೆ ವಿರೋಧವಾಗಿ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಕೇಂದ್ರದ ಆಡಳಿತರೂಢ ಬಿಜೆಪಿಯನ್ನೇ ಹಿಂದಿಕ್ಕಿದೆ.

ಕಾಕ್ರೋಚ್ ಜನತಾ ಪಕ್ಷ(CJP) ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ಇತ್ತ ಬೆಂಗಳೂರಿನ ಫ್ರೀಡಂಪಾರ್ಕ್​​ ನಲ್ಲಿ ನಡೆದ ಯುವ ಕಾಂಗ್ರೆಸ್​ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕರು ಐ ಆಮ್ ಕಾಕ್ರೋಚ್ ಎಂಬ ಟೀ ಶರ್ಟ್ ಅನ್ನು ಬಿಡುಗಡೆ ಮಾಡಿದರು.

ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಾಂಪ್ರಮೈಸ್, ಐ ಆಮ್ ಕಾಕ್ರೋಚ್ ಎಂಬ ಟೀ ಶರ್ಟ್ ಬಿಡುಗಡೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ‘ಮೋದಿ ಸರ್ಕಾರ ಶಿಕ್ಷಣ ಮಾಫಿಯಾಗೆ ಎಲ್ಲವನ್ನೂ ಒಪ್ಪಿಸಿಬಿಟ್ಟಿದೆ. ಹಿಂದಿನ ಬಿಜೆಪಿ ಸರ್ಕಾರ ಪೇಪರ್ ಲೀಕ್ ಗೆ ಹೆಸರುವಾಸಿಯಾಗಿತ್ತು. ನೂರಾರು ಎಕ್ಸಾಂ ಪೇಪರ್ ಗಳು ಬಿಜೆಪಿ ನಾಯಕರ ಮೂಗಿನ ಅಡಿಯಲ್ಲೇ ನಡೆದಿವೆ. ಇಂದು ಪ್ರಧಾನಿಗಳಿಗೆ ಇಲ್ಲಿಂದ ಆಗ್ರಹ ಮಾಡ್ತೇವೆ. ಮೋದಿಯವರು ಪರೀಕ್ಷಾ ಪೇ ಚರ್ಚಾ ಬಿಟ್ಟು ಪೇಪರ್ ಲೀಕ್ ಪೇ ಚರ್ಚೆ ಮಾಡಬೇಕು’ ಎಂದರು.

ಬಳಿಕ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರು ಮಾತನಾಡಿ, ‘ನೀಟ್ ಅಕ್ರಮದಿಂದ ಬಹಳಷ್ಟು ವಿದ್ಯಾರ್ಥಿಗಳ ಭವಿಷ್ಯ ಇಂದು ಅತಂತ್ರವಾಗಿದೆ. 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಯಾರು ಕೋಚಿಂಗ್ ಸೆಂಟರ್ ನಡೆಸುತ್ತಿದ್ದರು ಅವರೇ ಇಂದು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ. ಇದೊಂದು ದೊಡ್ಡ ದಂಧೆ‌’ ಎಂದು ಆರೋಪಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp