• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

Sambrama Prabha News by Sambrama Prabha News
February 3, 2026
in Politics
0
‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

Updated By: Priyalachhi

ಬೆಂಗಳೂರು: ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.

ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದರು.

“ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಹೇಳಿದರು.

ವಿಬಿ-ಜಿ ರಾಮ್‌ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ ಮತ್ತು ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸಿಎಂ ಆಗ್ರಹಿಸಿದರು.

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

Tags: ವಿಧಾನಸಭೆ
Previous Post

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್

Next Post

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಗಾಂಧಿ ಟೀಕೆ

Next Post
ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಗಾಂಧಿ ಟೀಕೆ

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಗಾಂಧಿ ಟೀಕೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.