BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಮುಂದಿನ CM ಡಿ.ಕೆ ಶಿವಕುಮಾರ್: ಬೆಳಗಾವಿಯಲ್ಲಿ ರಾರಾಜಿಸಿದ ಬ್ಯಾನರ್

Author Picture
Published On: May 16, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು “ಮುಂದಿನ ಸಿಎಂ” ಎಂದು ಬಿಂಬಿಸುವ ಹೋರ್ಡಿಂಗ್ ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಚೆನ್ನಮ್ಮ ವೃತ್ತದಲ್ಲಿ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮತ್ತೆ ಆರಂಭವಾಗುವಂತೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಕೆ ಶಿವಕುಮಾರ್ ಜನ್ಮದಿನದ ಶುಭಾಶಯದ ಹೆಸರಿನಲ್ಲಿ ಈ ಬೃಹತ್ ಬ್ಯಾನರ್’ವೊಂದನ್ನು ಹಾಕಿಸಿದ್ದಾರೆ.

ಆದರೆ ಬ್ಯಾನರ್‌ನಲ್ಲಿ “Next Chief Minister” ಎಂಬ ಪದ ಬಳಕೆಯಾಗಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಂದುವರಿಸಬೇಕು ಎಂಬ ಒತ್ತಾಯ ಹಲವು ಕಾಂಗ್ರೆಸ್ ಶಾಸಕರಿಂದ ಕೇಳಿಬರುತ್ತಿರುವ ಸಮಯದಲ್ಲೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತು ಹಲವು ಬಾರಿ ಊಹಾಪೋಹಗಳು ಕೇಳಿಬಂದಿದ್ದವು.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರವಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಿರಂತರವಾಗಿ ಸದ್ದು ಮಾಡುತ್ತಲೇ ಇದೆ. ಆದರೆ, ಪಕ್ಷದ ಹೈಕಮಾಂಡ್ ಈ ಕುರಿತು ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಬಣದಿಂದಲೇ ಡಿಕೆ ಶಿವಕುಮಾರ್ ಅವರನ್ನು “ಮುಂದಿನ ಸಿಎಂ” ಎಂದು ಬಹಿರಂಗವಾಗಿ ಬಿಂಬಿಸಿರುವುದು ಹಲವು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಅಳವಡಿಸಲಾದ ಈ ಬೃಹತ್ ಹೋರ್ಡಿಂಗ್ ಸಾರ್ವಜನಿಕರು ಹಾಗೂ ರಾಜಕೀಯ ವಲಯದ ಗಮನ ಸೆಳೆದಿದ್ದು, ಕಾಂಗ್ರೆಸ್ ಒಳಗಿನ ಶಕ್ತಿ ಸಮೀಕರಣಗಳ ಕುರಿತು ಹೊಸ ಚರ್ಚೆ ಹುಟ್ಟುಹಾಕಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp