• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುವ ವಿಶ್ವಾಸವಿದೆ: ಸಿಎಂ

Sambrama Prabha News by Sambrama Prabha News
January 6, 2026
in Politics
0
ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುವ ವಿಶ್ವಾಸವಿದೆ: ಸಿಎಂ

Updated By: Priyalachhi 

ಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ, ದೇವರಾಜ ಅರಸು ಹಾಗೂ ನಾನು ಮೈಸೂರಿನವರೇ. ಇಬ್ಬರೂ ದೀರ್ಘಾವಧಿ ಮುಖ್ಯಮಂತ್ರಿಗಳಾಗಿದ್ದು, ಕಾಲಘಟ್ಟ ಬೇರೆ ಬೇರೆ. ದೇವರಾಜ ಅರಸು ಅವರು 1972 ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡನೇ ಅವಧಿಗೆ ಸಿಎಂ ಆಗಿದ್ದೇನೆ ಎಂದರು.

ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ. ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುವ ವಿಶ್ವಾಸವಿದೆ ಎಂದರು. ಇದೇ ವೇಳೆ ಸಂಪುಟ ಪುನಾರಚನೆ ಬಗ್ಗೆ ದೆಹಲಿಯಿಂದ ಕರೆ ಬಂದಾಗ ಮಾತನಾಡುವುದಾಗಿ ಸಿಎಂ ತಿಳಿಸಿದರು.

ರಾಜಕಾರಣ ತೃಪ್ತಿ ತಂದಿದೆ: ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದು ಹೇಳಿದರು.

Tags: ಸಿಎಂ
Previous Post

ಹೊಸ ಮಾರ್ಗಗಳಲ್ಲಿ ಮೆಟ್ರೊ ಸಂಚಾರ ಆರಂಭ

Next Post

ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

Next Post
ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.