• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ

Sambrama Prabha News by Sambrama Prabha News
May 18, 2026
in Home, Latest News, Nation News
0
ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಧಾರವಾಡ: ರಾಜ್ಯದಲ್ಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಖ್ಯಸ್ಥರುಗಳ ಕಚೇರಿಯಲ್ಲಿ ಬೀಡುಬಿಟ್ಟಿರುವ ನೌಕರರನ್ನು ಬದಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರ ಪಟ್ಟಿ ಸಿದ್ಧಪಡಿಸಿ ಮೇ 28ರೊಳಗಾಗಿ ಕಡ್ಡಾಯ ವರ್ಗಾವಣೆಗೆ ಸೂಚಿಸುವ ಮೂಲಕ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ಹೀಗಾಗಿ ಧಾರವಾಡ ಆಯುಕ್ತಾಲಯ ವ್ಯಾಪ್ತಿಯ ಬರೋಬ್ಬರಿ 1,026 ಬೋಧಕೇತರ ನೌಕರರಿಗೆ ಈಗ ದೊಡ್ಡ ಶಾಕ್ ಎದುರಾಗಿದೆ.

ಮುಖ್ಯಾಂಶಗಳು

  • ಶಿಕ್ಷಣ ಇಲಾಖೆಯ ಇತಿಹಾಸದಲ್ಲೇ ದಿಟ್ಟ ಹೆಜ್ಜೆ
  • ಧಾರವಾಡ ಆಯುಕ್ತಾಲಯವೊಂದರಲ್ಲೇ 1,026 ನೌಕರರ ವರ್ಗಾವಣೆ ಫಿಕ್ಸ್​​
  • ಸರಕಾರದ ನಿರ್ಧಾರಕ್ಕೆ ವ್ಯಾಪಕ ಪ್ರಶಂಸೆ

ಡಿಡಿಪಿಐ, ಅಪರ ಆಯುಕ್ತರ ಕಚೇರಿ ಸೇರಿದಂತೆ ಇಲಾಖೆ ಮುಖ್ಯಸ್ಥರುಗಳ ಕಚೇರಿಯಲ್ಲಿ 15ಕ್ಕೂ ಹೆಚ್ಚು ವರ್ಷಗಳಿಂದ ಸೂಪರಡೆಂಟ್, ಎಫ್‌ಡಿಎ, ಎಸ್‌ಡಿಎ, ಪ್ಯೂನ್ ಸೇರಿದಂತೆ ಎ,ಬಿ,ಸಿ,ಡಿ ವರ್ಗದ ನೌಕರರು ಸೇವೆ ಸಲ್ಲಿಸುತ್ತಿದ್ದರು. ಇದರಿಂದ ಪಾರದರ್ಶಕ ಆಡಳಿತ, ತ್ವರಿತ ಕೆಲಸಗಳಿಗೆ ಅಡ್ಡಿ ಆಗಿತ್ತು. ಕೆಲವೆಡೆ ಭ್ರಷ್ಟಾಚಾರದ ಆರೋಪಗಳೂ ಕೇಳಿ ಬಂದಿದ್ದವು. ಹೀಗಾಗಿ ಸರಕಾರ ಅಂಥವರನ್ನು ಗುರುತಿಸಿ ಕಡ್ಡಾಯ ವರ್ಗಾವಣೆಗೆ ಅಸ್ತು ಎಂದಿದೆ. ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.

ಮುಖ್ಯಸ್ಥರ ಕಚೇರಿಗಳಲ್ಲಿ 5 ವರ್ಷ ಪೂರ್ಣಗೊಳಿಸಿದ ಸಿ.ಡಿ ವೃಂದದ ನೌಕರರನ್ನು 2026-27ರ ಶೈಕ್ಷಣಿಕ ವರ್ಷದ ಆರಂಭದೊಳಗಡೆ ಕೌನ್ಸಿಲಿಂಗ್ ಮೂಲಕ ವರ್ಗಾಯಿಸಬೇಕು. ಈ ಪ್ರಕ್ರಿಯೆ ಇಲಾಖಾ ಮುಖ್ಯಸ್ಥರ ಹಂತದಲ್ಲಿಯೇ ಮಾಡಿ ವರ್ಗಾವಣೆ ಆದೇಶಗಳನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಇನ್ನು 5 ವರ್ಷ ಸೇವೆ ಪೂರ್ಣಗೊಂಡು, ವರ್ಗಾವಣೆಗೊಳಿಸಿದ್ದರೂ ಪುನಃ ಕೇಂದ್ರ ಕಚೇರಿಗೆ ಹಿಂದಿರುಗಿರುವ ಮತ್ತು ಪ್ರಸ್ತುತ 5 ವರ್ಷಗಳ ಸೇವೆ ಪೂರ್ಣಗೊಳಿಸಿದವರ ಕಡ್ಡಾಯ ವರ್ಗಾವಣೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ. ಅದರಂತೆ ಎಲ್ಲ ಮುಖ್ಯಸ್ಥರ ಕಚೇರಿಯಲ್ಲಿ ವರ್ಗಾವಣೆ ಪಟ್ಟಿ ಸಜ್ಜುಗೊಳ್ಳುತ್ತಿದೆ. ರಾಜ್ಯಾದ್ಯಂತ ಸಾವಿರಾರು ನೌಕರರು ಈ ರೀತಿ ದಶಕಗಳಿಂದ ಒಂದೇ ಕಡೆ ಸೇವೆ ಸಲ್ಲಿಸುತ್ತಿರುವ ಅಂದಾಜಿದೆ.

ಧಾರವಾಡ ವಿಭಾಗದಲ್ಲೇ 1,026 ನೌಕರರ ಪತ್ತೆ

ಶಾಲಾ ಶಿಕ್ಷಣ ಇಲಾಖೆ ಧಾರವಾಡ ಅಪರ ಆಯುಕ್ತರ ಕಚೇರಿಯಲ್ಲಿ 1,026 ಬೋಧಕೇತರ ನೌಕರರು 7-15 ವರ್ಷಗಳಿಂದ ಒಂದೆ ಕಡೆ ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಆಯುಕ್ತಾಲಯ ಪಟ್ಟಿ ಸಿದ್ಧಪಡಿಸಿತ್ತಾದರೂ ಹಲವರು ಅದೇ ಸ್ಥಳದಲ್ಲಿ ಮುಂದುವರಿಯಲು ಪ್ರಭಾವ ಬಳಸುತ್ತಿದ್ದರು. ಆದರೆ ಈ ನೌಕರರು ಸಾರ್ವಜನಿಕರು ಮತ್ತು ಶಿಕ್ಷಕರಿಗೆ ಸ್ಪಂದಿಸುತ್ತಿಲ್ಲ. ಕಡತ ವಿಲೇವಾರಿ ವಿಳಂಬ ಆಗುತ್ತಿದೆ. ಭ್ರಷ್ಟಾಚಾರಗಳೂ ನಡೆಯುತ್ತಿವೆ ಎಂಬ ದೂರುಗಳು ಬಂದಿದ್ದರಿಂದ 2025 ಜುಲೈನಲ್ಲಿ ಸ್ವತಃ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಪರ ಆಯುಕ್ತರಿಗೆ ಪತ್ರ ಬರೆದಿದ್ದರು. ಇಷ್ಟಾದರೂ ಕೆಲವರು ಅಲ್ಲಿಯೇ ಉಳಿದುಕೊಂಡಿದ್ದರು.

ಜನಸಾಮಾನ್ಯರಿಂದ ವ್ಯಾಪಕ ಪ್ರಶಂಸೆ

ಇದೀಗ ಸರಕಾರವೇ ರಾಜ್ಯದ ಎಲ್ಲ ಮುಖ್ಯಸ್ಥರ ಕಚೇರಿಗಳಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರ ವರ್ಗಾವಣೆಯನ್ನು ಕಡ್ಡಾಯಗೊಳಿಸಿದೆ. ಸರಕಾರದ ಈ ನಿರ್ಧಾರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಒಂದೇ ಕಡೆ ಹಲವಾರು ವರ್ಷಗಳ ಕಾಲ ಕೆಲಸ ಮಾಡುವ ಸಿಬ್ಬಂದಿ, ಸಾಕಷ್ಟು ಭ್ರಷ್ಟಾಚಾರ ಮಾಡುತ್ತಾರೆ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಹೀಗಾಗಿ ಸರಕಾರದ ನಿರ್ಧಾರವನ್ನು ನಾಗರಿಕರು ಸ್ವಾಗತಿಸಿದ್ಧಾರೆ.

Tags: ಶಿಕ್ಷಣ ಇಲಾಖೆ
Previous Post

ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ

Next Post

ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ?

Next Post
ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ?

ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ?

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.