ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಅಂಬೇಡ್ಕರ್ ಫೋಟೋ ಮತ್ತು ಸಂವಿಧಾನದ ಪ್ರತಿಯನ್ನು ಜೇಬಿನಲ್ಲಿಟ್ಟುಕೊಂಡು ಓಡಾಡಿದ್ರೆ ಉಪಯೋಗವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪರೋಕ್ಷವಾಗಿ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ಪ್ರಪಂಚದಲ್ಲಿ ನಮ್ಮ ದೇಶದಂತ ಸಂವಿಧಾನ ಎಲ್ಲೂ ಇಲ್ಲ, ಅಂತಹ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದಾರೆ. ಅವರಿಗೆ ಚಿರ ಋುಣಿಗಳಾಗಿ ನಾವಿರಬೇಕು. ಅಂಬೇಡ್ಕರ್ ಫೋಟೋ ಮತ್ತು ಸಂವಿಧಾನದ ಪ್ರತಿಯನ್ನು ಜೇಬಿನಲ್ಲಿಟ್ಟುಕೊಂಡು, ಕೆಂಪು ಬಣ್ಣದೊಂದು ಡೈರಿ ತೋರಿಸಿಕೊಂಡು ಪಾರ್ಲಿಮೆಂಟ್ ನಲ್ಲಿ ಓಡಾಡಿದ್ರೆ ಏನು ಉಪಯೋಗವಿಲ್ಲ. ಸಂವಿಧಾನವನ್ನು ರಕ್ಷಿಸುವ ಕೆಲಸ ಮಾಡಬೇಕು

ಈ ಸರ್ಕಾರ ಹೋರಾಟ ಮಾಡು ಉದ್ದೇಶದಿಂದ ನಾನು ಕೂಡ ಸುಮ್ಮನೆ ಇರುವ ಹಾಗಿಲ್ಲ. ಜನರ ಪರವಾಗಿ ನಾನು ಸಹ ದನಿ ಎತ್ತಬೇಕಾಗಿದೆ. ಇನ್ನು ಮುಂದೆ ವಾರದಲ್ಲಿ ಎರಡು ದಿನ ಕರ್ನಾಟಕದಲ್ಲೇ ಇರುತ್ತೇನೆ. ಪಕ್ಷವನ್ನು ಸಂಘಟನೆ ಮಾಡುತ್ತೇನೆ ಹಾಗೂ ಜನರ ಪರವಾಗಿಯೂ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಪೊಲೀಸ್ ಕೇಸುಗಳಿಗೆಲ್ಲ ಹೆದರಬೇಡಿ. ಆ ಕೇಸುಗಳನ್ನು ಕಿತ್ತೆಸೆಯುವುದು ನಮ್ಮ ಜವಾಬ್ದಾರಿ ಎಂದು ಕುಮಾರಸ್ವಾಮಿ ಅವರು ನಿರುದ್ಯೋಗಿ ಯುವಕರಿಗೆ ಧೈರ್ಯ ತುಂಬಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version