Updated By: Priyalachhi

ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರ ನೀಡಿದರು.

ಬಿಜೆಪಿ ಶಾಸಕ ಮುನಿರಾಜು ಅವರು ಅರ್ಕಾವತಿ ಬಡಾವಣೆ ನಿರ್ಮಾಣವಾಗಿ 20 ವರ್ಷವಾಗಿದ್ದರೂ ನಿವೇಶನ ಸ್ವಾಧೀನ, ರೈತರಿಗೆ ಪರಿಹಾರ ನೀಡದಿರುವ ಬಗ್ಗೆ ಕೇಳಿದಾಗ, “ಅರ್ಕಾವತಿ ಬಡಾವಣೆ ಎಸ್.ಎಂ ಕೃಷ್ಣ ಅವರ ಕಾಲದಲ್ಲೇ ಆರಂಭವಾಯಿತು. ಈ ಮಧ್ಯೆ ನಿವೇಶನಕ್ಕೆ ಅನೇಕರು ಅರ್ಜಿ ಹಾಕಿಕೊಂಡು, ಅವರಿಗೆ ನಿವೇಶನ ಮಂಜೂರಾಯಿತು. ಭೂಸಂತ್ರಸ್ತರಿಗೆ ಅದೇ ಜಾಗದಲ್ಲಿ ಪರಿಹಾರವಾಗಿ ಜಾಗ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ಮುಂದೆ ಯಾವ ರೀತಿ ಮಾಡಬೇಕು ಎಂದು ನಿರ್ಧರಿಸಲು ಕೇಶವ ನಾರಾಯಣ ಸಮಿತಿ ನೇಮಿಸಿದೆ.

ಈ ಸಮಿತಿ ಪರಿಶೀಲನೆ ಮಾಡುತ್ತಿದೆ. ಭೂಸಂತ್ರಸ್ತ ರೈತರಿಗೆ ಪರಿಹಾರವಾಗಿ ಭೂಮಿ ನೀಡಬೇಕು ಎಂಬುದಕ್ಕೆ ನಾನು ಬದ್ಧವಾಗಿದ್ದೇನೆ. ಈ ವಿಚಾರವಾಗಿ ಸಧ್ಯದಲ್ಲೇ ಸಭೆ ಕರೆಯಲಿದ್ದು, ಸಮಿತಿಯವರನ್ನು ಕರೆದು ಆದಷ್ಟು ಬೇಗ ತೀರ್ಮಾನ ಮಾಡುವಂತೆ ಮನವಿ ಮಾಡಲಾಗುವುದು. ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಸ್ಪಷ್ಟ ಉತ್ತರ ನೀಡಲಾಗುವುದು” ಎಂದು ಭರವಸೆ ನೀಡಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version