Updated By: Priyalachhi 

ಬೆಂಗಳೂರು: ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಇಂದು ಬೆಳಗ್ಗೆ 11.30ಕ್ಕೆ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ, ನಿನ್ನೆ ರಾಹುಲ್ ಗಾಂಧಿಯವರು ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.

ವಿಬಿ ಜಿ ರಾಮ್‌ ಜಿ ಕಾಯ್ದೆ ಚರ್ಚೆ

ಮನರೇಗಾ ಯೋಜನೆ ಬದಲಿಸಿ ವಿಬಿ ಜಿ ರಾಮ್‌ ಜಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸುವ ಸಂಬಂಧ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬುಧವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version