Updated By: Priyalachhi

ನವದೆಹಲಿ: ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವಂತೆಯೇ ಇತ್ತ ಭಾರತ ಸರ್ಕಾರ ಅಲ್ಲಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲು ಮುಂದಾಗಿದೆ.

ಭದ್ರತಾ ದೃಷ್ಟಿಯಿಂದ ಈಗಾಗಲೇ ಇರಾನ್ ನಲ್ಲಿರುವ ಭಾರತೀಯರಿಗೆ ಕೂಡಲೇ ಇರಾನ್ ತೊರೆಯುವಂತೆ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದ್ದು, ಅದಾಗ್ಯೂ ಇರಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ.

ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಸರ್ಕಾರ ತುರ್ತು ಯೋಜನೆಗಳನ್ನು ರೂಪಿಸಲು ಪ್ರಾರಂಭಿಸಿದೆ.

ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ‘ಇರಾನ್ ನ ಹೆಚ್ಚಿನ ಭಾಗಗಳಲ್ಲಿ ಅಶಾಂತಿ ಮುಂದುವರೆದಿದ್ದು, ಇರಾನ್‌ನಲ್ಲಿನ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಮರಳುವಿಕೆಗೆ ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ” ಎಂದು ತಿಳಿಸಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version