Updated By: Priyalachhi

ಬೆಂಗಳೂರು: ಬೆಂಗಳೂರು- ಮೈಸೂರು ಮೂಲಸೌಕರ್ಯ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನನ್ನ ಹೆಸರನ್ನು ಇದರಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಜಿ ಪ್ರಧಾನಿ, ಎಚ್.ಡಿ.ದೇವೇಗೌಡರು ಹೇಳಿದ್ದಾರೆ.

ಬುಧವಾರ ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೆಲವು ರೈತರು ಹಾಗೂ ನನ್ನನ್ನು ಉಲ್ಲೇಖ (ಪಾರ್ಟಿ) ಮಾಡಿದೆ. ನಾನು ಈ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು.

ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ ಎಂದು ತಿಳಿಸಿದರು.

ಈ ಯೋಜನೆಯು ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್‍ಶಿಪ್ ಗಳು, ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ. ನೈಸ್ ಕಂಪೆನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರೂಪಾಯಿ ಕೊಡುತ್ತಿದ್ದಾರಂತೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version