• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Sambrama Prabha News by Sambrama Prabha News
January 2, 2026
in Politics
0
ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ:  ಸಿಎಂ ಸಿದ್ದರಾಮಯ್ಯ

Updated By: Priyalachhi 

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಇತ್ಯರ್ಥವಾಗದೆ ಮುಂದುವರೆದಿರುವುದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ.

ಈಗಾಗಲೇ 16 ಬಜೆಟ್‌ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ ಬಜೆಟ್‌ ಅನ್ನು ನಾನೇ ಮಂಡಿಸುತ್ತೇನೆ. ಈ ತಿಂಗಳಿನಿಂದ ಬಜೆಟ್ ಗೆ ಸಿದ್ಧತೆ ನಡೆಸುವುದಾಗಿ ಗುರುವಾರ ಹೇಳಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

Image

ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸಮ್ಮೇಳನ ಸಭಾಂಗಣದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು.

ಸರ್ಕಾರದ ಅಪರ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಜಿಪಿಸಿಸಿಎಫ್ ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸಿಎಂ ಭೇಟಿಯಾಗಿ ಶುಭಾಶಯ ತಿಳಿಸಿದರು.

Image

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026 ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ. ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಕಾಣಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.

Tags: ಸಿಎಂ ಸಿದ್ದರಾಮಯ್ಯ
Previous Post

ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Next Post

ರಾಹುಲ್ ಗಾಂಧಿ ರಾಮನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ : ನಾನಾ ಪಟೋಲೆ

Next Post
ರಾಹುಲ್ ಗಾಂಧಿ ರಾಮನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ : ನಾನಾ ಪಟೋಲೆ

ರಾಹುಲ್ ಗಾಂಧಿ ರಾಮನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ : ನಾನಾ ಪಟೋಲೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.