Updated By: Priyalachhi 

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಇತ್ಯರ್ಥವಾಗದೆ ಮುಂದುವರೆದಿರುವುದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ.

ಈಗಾಗಲೇ 16 ಬಜೆಟ್‌ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ ಬಜೆಟ್‌ ಅನ್ನು ನಾನೇ ಮಂಡಿಸುತ್ತೇನೆ. ಈ ತಿಂಗಳಿನಿಂದ ಬಜೆಟ್ ಗೆ ಸಿದ್ಧತೆ ನಡೆಸುವುದಾಗಿ ಗುರುವಾರ ಹೇಳಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

Image

ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸಮ್ಮೇಳನ ಸಭಾಂಗಣದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು.

ಸರ್ಕಾರದ ಅಪರ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಜಿಪಿಸಿಸಿಎಫ್ ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸಿಎಂ ಭೇಟಿಯಾಗಿ ಶುಭಾಶಯ ತಿಳಿಸಿದರು.

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026 ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ. ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಕಾಣಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version