Updated By: Priyalachhi

ಬೆಂಗಳೂರು: ರಾಜ್ಯದ ಆರು ಸಾವಿರ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೆಸರು ಇಡಲು ತೀರ್ಮಾನ ಮಾಡಲಾಗಿದೆ. ಈ ಕುರಿತಾಗಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ರಾಜಭವನ ಚಲೋದಲ್ಲಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಪ್ರತಿಭಟನೆ ಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಪ್ರತಿ ಗ್ರಾಮ ಪಂಚಾಯತಿಗೆ ಮಹಾತ್ಮಾ ಗಾಂಧಿ ಹೆಸರು. ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡುತ್ತೇವೆ. 6000 ಗ್ರಾಮ ಪಂಚಾಯತಿಗಳು ಇವೆ. ಅವುಗಳಿಗೆ ಮಹಾತ್ಮಾ ಗಾಂಧಿ ಹೆಸರು ಇಡುತ್ತೇವೆ” ಎಂದು ತಿಳಿಸಿದರು.

ಮನರೇಗಾ ರದ್ದು ಮಾಡಿ ವಿಬಿ ಜಿ ರಾಮ್ ಜಿ ಕಾಯ್ದೆ ತಂದಿದ್ದಾರೆ. ದುರುದ್ದೇಶದಿಂದ ರಾಮ್ ಹೆಸರು ಬರುವ ರೀತಿ ಮಾಡಿದ್ದಾರೆ. ಅಲ್ಲಿ ಸೀತಾ ರಾಮ, ಕೌಶಲ್ಯ ರಾಮ, ದಶರಥ ರಾಮ ಇಲ್ಲ. ಮನಹೋಹನ್ ಸಿಂಗ್ ಇದ್ದಾಗ ಈ ಕಾಯ್ದೆ ಮಾಡಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಅನೇಕ ಕಾಯ್ದೆ ಜಾರಿಗೊಂಡಿತ್ತು‌. ಬಡವರು, ದಲಿತರು, ಅಲ್ಪಸಂಖ್ಯಾತರು, ರೈತರ ಬಗ್ಗೆ ಕಾಂಗ್ರೆಸ್ ಮಾತ್ರ ಚಿಂತನೆ ಮಾಡುತ್ತದೆ. ಬಿಜೆಪಿ ಎಲ್ಲಾ ಕಾರ್ಯಕ್ರಮ ನಾಶ ಮಾಡಿ ಉದ್ಯೋಗ ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಬಡವರಿಗೆ ಹಣಕಾಸು ಸಿಗಬಾರದು, ಅವರು ಸೇವಕರಾಗಿ ಇರಬೇಕು ಎಂಬ ಉದ್ದೇಶದಿಂದ ಆರ್ ಎಸ್ ಎಸ್ ಮಾರ್ಗದರ್ಶನ ಮಾಡಿ ಕಾಯ್ದೆ ರದ್ದು ಮಾಡಲಾಗಿದೆ‌ ಎಂದು ವಾಗ್ದಾಳಿ ನಡೆಸಿದರು. ಮನರೇಗಾ ದಲ್ಲಿ ಉದ್ಯೋಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ತೀರ್ಮಾನ ಆಗುತ್ತಿತ್ತು. ಆದರೆ ಜಿ ರಾಮ್ ಜಿ ಯಲ್ಲಿ ದೆಹಲಿಯಲ್ಲಿ ಎಲ್ಲ ತೀರ್ಮಾನ ಆಗುತ್ತದೆ. ನೀವು ಉದ್ದೇಶಿಸಿದ ಕಡೆ ಕೆಲಸ ಸಿಗಲ್ಲ ಎಂದು ವಿವರಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version