Updated By: Priyalachhi

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (IEC)ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿಜವಾದ ಮತದಾರರ ಬಗ್ಗೆ ಕಾಳಜಿ ಹೊಂದಿದ್ದು, ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದರು.

ಎಸ್ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಬಿಎಲ್ ಓ ಗಳಿಗೆ ಸೂಚಿಸಲಾಗಿದೆ.ಮಹಾನಗರ ಪಾಲಿಕೆ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂಬುದು ನಮ್ಮ ಬೇಡಿಕೆಯೂ ಆಗಿದೆ. ಜನರು ಕೂಡ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಯಲಿ ಎಂಬ ಆಗ್ರಹ ಮಾಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಶಾಸಕ ಜನಾರ್ದನರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರೆಡ್ಡಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲು ಸೇರಿದ್ದರು. “ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ. ಅಲ್ಲಿ ಅವರಿಗೆ ನಮ್ಮ ವಿರುದ್ಧ ಆರೋಪ ಮಾಡುವ ನೈತಿಕ ಹಕ್ಕಿಲ್ಲ” ಎಂದು ಸಿದ್ದರಾಮಯ್ಯ ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version