ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಜೆಡಿಎಸ್ ಗೆ ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣವನ್ನು ಬಿಡಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ಜೆಡಿಎಸ್ ಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೊಮ್ಮಘಟ್ಟದ ಬಳಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದಲ್ಲಿ 1 ಲಕ್ಷ ಹೆಚ್ಚು ಜನ ಭಾಗಿಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿ ಪಕ್ಷ ಹಾಲಿ, ಮಾಜಿ, ಶಾಸಕರು, ಸಂಸದರು ಭಾಗಿಯಾಗಿದ್ದರು.

ಬೆಳ್ಳಿ ಹಬ್ಬದ ಸಮಾವೇಶ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ಕರ್ನಾಟಕಕ್ಕೆ ಹಿಡಿದಿರೋ ಗ್ರಹಣ ಮುಕ್ತಿಗಾಗಿ ಜೆಡಿಎಸ್ ಗೆ ಒಂದು ಬಾರಿ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಬೆಂಗಳೂರಿಗೆ ಮೆಟ್ರೋ ಯೋಜನೆ ಸೇರಿ ಅನೇಕ ಯೋಜನೆ ಕೊಟ್ಟವನು ನಾನು, ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಚದರ ಅಡಿಗೆ 100 ರೂ. ಫಿಕ್ಸ್ ಮಾಡಿದೆ ಎಂದು ಮಾಜಿ ಸಿಎಂ ಆರೋಪಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದರೂ ಜನರ ಆಶೀರ್ವಾದದಿಂದ ಸಿಎಂ ಆಗಿಲ್ಲ ಎಂದ ಕುಮಾರಸ್ವಾಮಿ ಒಂದು ಬಾರಿ ಜೆಡಿಎಸ್ ಅಧಿಕಾರ ಕೊಡಿ ಎಂದು ಮನವಿ ಮಾಡಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version