Updated By: Priyalachhi

ಬೆಳಗಾವಿ: ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್​​ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.

ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್‌ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ.

ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version