BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಕರಾವಳಿ ಮೂಲಕ ಬೆಂಗಳೂರು-ಗೋವಾ ವಂದೇ ಭಾರತ್ ರೈಲು ಆರಂಭಿಸಿ: ರೈಲ್ವೆ ಸಚಿವರಿಗೆ HDK ಮನವಿ

Author Picture
Published On: December 23, 2025

—Advertisement—

Updated By: Priyalachhi

ಬೆಂಗಳೂರು: ಕರಾವಳಿ ಕರ್ನಾಟಕದ ಮೂಲಕ ಬೆಂಗಳೂರು ಮತ್ತು ಗೋವಾದ ಮಡ್ಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.

ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾರ್ವಜನಿಕ ಬೇಡಿಕೆ ಇದಾಗಿದೆ ಮತ್ತು ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಪ್ರಸ್ತಾವಿತ ಈ ಹೈ-ಸ್ಪೀಡ್ ರೈಲು ಸೇವೆಯು ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾದ ಕರಾವಳಿ ನಡುವಿನ ರೈಲು ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp