Updated By: Priyalachhi

ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿ ವೇಳೆ ಕುಮಾರಸ್ವಾಮಿ ಅವರು, ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಹಾಗೂ ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಚರ್ಚಿಸಿದರು.

ಶಾಶ್ವತ ಪರಿಹಾರಕ್ಕೆ ಆಗ್ರಹ: ವನ್ಯಜೀವಿಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನು ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಭೂಪೇಂದ್ರ ಯಾದವ್‌ ಅವರನ್ನು ವಿನಂತಿಸಿದರು.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನ ಮುಗಿಯುವುದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್‌ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ಕೊಟ್ಟರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version