ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಕರ್ನಾಟಕದಲ್ಲಿ ಭಾರಿ ಹೂಡಿಕೆ ಮಾಡಲು ಯೋಜಿಸಿರುವ 13 ಕಂಪನಿಗಳಿಗೆ ಹೆಚ್ಚುವರಿ ಪ್ರೋತ್ಸಾಹಕಗಳನ್ನು ನೀಡುವ ಬಗ್ಗೆ ಚರ್ಚಿಸಿದೆ. ಕಂಪನಿಗಳ ಬೇಡಿಕೆ ಆಧರಿಸಿ ಪ್ರೋತ್ಸಾಹಕಗಳನ್ನು ನೀಡುವ ಕೆಲಸವನ್ನು ಈ ಉಪಸಮಿತಿ ನೋಡಿಕೊಳ್ಳುತ್ತದೆ.

ಮೂಲಗಳ ಪ್ರಕಾರ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕಂಪೆನಿ ಮತ್ತು ಸರ್ಕಾರಕ್ಕೆ ಲಾಭವಾಗುವ (win-win) ಪರಿಹಾರ ಕಂಡುಹಿಡಿಯಲು ಪ್ರತಿಯೊಂದು ಕಂಪನಿಯೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಬೇಕು ಎಂದು ಉಪಸಮಿತಿ ಸೂಚಿಸಿದೆ.

ಕೆಲವು ಕಂಪನಿಗಳು 40 ಶೇಕಡದವರೆಗೆ ಹೆಚ್ಚುವರಿ ಪ್ರೋತ್ಸಾಹಕಗಳನ್ನು ಕೇಳಿವೆ. ಇದನ್ನು 35 ಶೇಕಡಾ ಅಥವಾ ಕೆಲ ಸಂದರ್ಭಗಳಲ್ಲಿ 20-25 ಶೇಕಡಾಕ್ಕೆ ಇಳಿಸಬಹುದೇ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಹೂಡಿಕೆಗಳು ರಾಜ್ಯಕ್ಕೆ ತರುವ ಲಾಭವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಯೋಜನೆಗಳನ್ನು ತಿರಸ್ಕರಿಸಲಾಗಿಲ್ಲ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕಂಪನಿಗಳು ಕನ್ನಡಿಗರಿಗೆ ಉದ್ಯೋಗಗಳಿಗೆ ಆದ್ಯತೆ ನೀಡುವಂತೆ ಖಚಿತಪಡಿಸಿಕೊಳ್ಳಬೇಕೆಂದು ಒತ್ತಿ ಹೇಳಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version