Updated By: Priyalachhi

ದಾವೋಸ್(ಸ್ವಿಡ್ಜರ್ಲಾಂಡ್): ಜಾಗತಿಕ ಹೂಡಿಕೆದಾರರಲ್ಲಿ ದೇಶದ ಅಗ್ರ ಹೂಡಿಕೆ ತಾಣವಾಗಿ ಕರ್ನಾಟಕದ ಸಾಮರ್ಥ್ಯದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಾವೋಸ್ ನಲ್ಲಿ ಮಾತನಾಡಿದ್ದಾರೆ. ಜಗತ್ತು ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತದೆ ಎಂದು ಹೇಳಿದ್ದಾರೆ.

ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯ ಸಂದರ್ಭದಲ್ಲಿ ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಡಿ ಕೆ ಶಿವಕುಮಾರ್, ದಾವೋಸ್ ನಲ್ಲಿ ಕಲಿಯಲು ಬಹಳಷ್ಟು ವಿಷಯಗಳಿವೆ. ಪ್ರಪಂಚದಾದ್ಯಂತದ ವಿವಿಧ ನಾಯಕರನ್ನು ನಾನು ಈ ಸಭೆಯಲ್ಲಿ ಭೇಟಿ ಮಾಡಿದ್ದೇನೆ. ಬೆಂಗಳೂರಿನ ಮೂಲಕ ಭಾರತವನ್ನು ವಿಶ್ವದ ನಾಯಕರು ನೋಡುತ್ತಿದ್ದಾರೆ ಎಂದರು.

ಈ ವಿಶ್ವ ಆರ್ಥಿಕ ವೇದಿಕೆಯಲ್ಲಿ ನಾನು ಅವರಿಗೆ ಕರ್ನಾಟಕದ ಮಹತ್ವವನ್ನು ಮತ್ತು ಅದು ಕೆಲಸ ಮಾಡಲು ಉತ್ತಮ ರಾಜ್ಯ ಎಂದು ಸಾರುತ್ತಿದ್ದೇನೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version