ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ರಾಮನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಹಾಜಿ ಸೈಯದ್ ಜಿಯಾವುಲ್ಲಾ ಹೃದಯಾಘಾತದಿಂದ ನಿಧನರಾಗಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ತೋಪ್‌ಖಾನ್ ಮೊಹಲ್ಲಾದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಡಿಸಿಎಂ ಡಿ.ಕೆ. ಶಿವಕುಮಾರ್​​ ಪಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಜಿಯಾವುಲ್ಲಾ ಸಾಕಷ್ಟು ನಿಕಟ ಸಂಬಂಧ ಹೊಂದಿದ್ದರು. ಅಂತಿಮ ದರ್ಶನದ ಬಳಿಕ ಮಾತನಾಡಿದ ಡಿಸಿಎಂ, ಸುಮಾರು 40 ವರ್ಷಗಳಿಂದ ಜಿಯಾವುಲ್ಲಾ ನನಗೆ ಪರಿಚಯವಿದ್ದು, ನಮ್ಮ ಪಕ್ಷದ ಆಧಾರವಾಗಿದ್ದರು. ತಿರುಪತಿಯಲ್ಲಿದ್ದ ನನಗೆ ಅವರ ಸಾವಿನ ಸುದ್ದಿ ಕೇಳಿ ಬಹಳ ಆಘಾತವಾಗಿದೆ ಎಂದವರು ತಿಳಿಸಿದ್ದಾರೆ.

 

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version