• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕಾಂತಾರ ದೈವಪಾತ್ರಕ್ಕೆ ಅಪಮಾನ ಆರೋಪ: ರಣವೀರ್ ಸಿಂಗ್

Sambrama Prabha News by Sambrama Prabha News
April 10, 2026
in Latest News, Nation News
0
ಕಾಂತಾರ ದೈವಪಾತ್ರಕ್ಕೆ ಅಪಮಾನ ಆರೋಪ: ರಣವೀರ್ ಸಿಂಗ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಕಾಂತಾರ ಚಾಪ್ಟರ್-1 ಸಿನಿಮಾದ ದೈವಪಾತ್ರದ ಕುರಿತು ಅಪಮಾನಕಾರಿ ಸನ್ನೆ ಮಾಡಿ ಮಾತನಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿ ಪರಿಷ್ಕೃತ ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವುದಾಗಿ ನಟ ರಣವೀರ್ ಸಿಂಗ್ ಹೈಕೋರ್ಟ್​ಗೆ ತಿಳಿಸಿದ್ದಾರೆ.

ಗೋವಾದಲ್ಲಿ ಕೆಲ ತಿಂಗಳ ಹಿಂದೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್ಎಫ್ಐ) ಕಾಂತಾರ ಚಾಪ್ಟರ್-1 ಚಿತ್ರದ ಚಾಮುಂಡಿ ದೈವಕ್ಕೆ ಅಪಮಾನ ಮಾಡಿದ ಆರೋಪದಡಿ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಿಚಾರಣೆ ನಡೆಸಿದರು.

ವಿಚಾರಣೆಯ ವೇಳೆ ದೂರುದಾರರ ಪರ ವಕೀಲರು, ಅರ್ಜಿದಾರ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಪಶ್ಚಾತ್ತಾಪವಿಲ್ಲ. ದೂರು ನೀಡಿರುವುದೇ ತಪ್ಪು ಎಂಬಂತೆ ಬಿಂಬಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಅರ್ಜಿದಾರರ ಪರ ವಕೀಲರು, ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿಯೇ ಪರಿಷ್ಕೃತ ಪ್ರಮಾಣ ಪತ್ರ ಸಲ್ಲಿಸುವುದಾಗಿ ಹೇಳಿದರು.

ಇದನ್ನೂ ಮುನ್ನ ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರ ಕ್ಷಮೆಯಾಚನೆಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಇದೇ 18ರಂದು ಮೈಸೂರಿನಲ್ಲಿರುವ ದೇವಸ್ಥಾನಕ್ಕೂ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು. ರಣವೀರ್ ಸಿಂಗ್ ಅವರ ಪ್ರಮಾಣ ಪತ್ರದಲ್ಲಿರುವ ಅಂಶಗಳನ್ನು ಓದಿ ಪೀಠಕ್ಕೆ ತಿಳಿಸಿದರು.

Tags: ಕಾಂತಾರರಣವೀರ್ ಸಿಂಗ್
Previous Post

ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ಆತ್ಮಹತ್ಯೆ

Next Post

ಶನಿವಾರದ ಪಂಚಾಂಗ, ಭವಿಷ್ಯ

Next Post
ಶನಿವಾರದ ಪಂಚಾಂಗ, ಭವಿಷ್ಯ

ಶನಿವಾರದ ಪಂಚಾಂಗ, ಭವಿಷ್ಯ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.