Updated By: Priyalachhi

ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡ ಅವರ ಕೌಟುಂಬಿಕ ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು-ಪ್ರತಿದೂರು ದಾಖಲಾಗಿದೆ.

ಕಾವ್ಯ ಗೌಡ ಅವರು ತಮ್ಮ ಪತಿ ಸೋಮಶೇಖರ್ ಅವರ ಅಣ್ಣ ನಂದೀಶ್ ಕುಟುಂಬದ ವಿರುದ್ಧ ರಾಮಮೂರ್ತಿ ನಗರ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ನಂದೀಶ್ ಹಾಗೂ ಪ್ರೇಮಾ ದಂಪತಿಯೂ ಕಾವ್ಯ ಗೌಡ ಅವರ ಕುಟುಂಬದ ವಿರುದ್ಧ ದೂರು ನೀಡಿದ್ದಾರೆ.

ಹಲ್ಲೆ ಮಾಡಿ ನಿಂದಿಸಲಾಗಿದೆ ಎಂದು ಪರಸ್ಪರ ದೂರುಗಳು ಬಂದಿದ್ದು, ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾವ್ಯ ಸಹೋದರಿ ಭವ್ಯಾ ಗೌಡ ಅವರ ದೂರೇನು?: ಕಾವ್ಯ ಗೌಡ ದಂಪತಿ ಹಾಗೂ ನಂದೀಶ್ – ಪ್ರೇಮಾ ದಂಪತಿ ಒಂದೇ ಕಟ್ಟಡದಲ್ಲಿ ವಾಸವಿದ್ದಾರೆ. ಪ್ರೇಮಾ, ನಂದೀಶ್, ರವಿಕುಮಾರ್, ಪ್ರಿಯಾ ಎಂಬವರು ಕಾವ್ಯ ಗೌಡರ ಮೇಲೆ ಹಲ್ಲೆ ನಡೆಸಿದ್ದಾರೆ. ಪತಿ ಸೋಮಶೇಖರ್ ಅವರಿಗೂ ಚಾಕುವಿನಿಂದ ಇರಿಯಲಾಗಿದೆ. ಅತ್ಯಾಚಾರದ ಬೆದರಿಕೆ ಹಾಕಲಾಗಿದೆ ಎಂದು ಕಾವ್ಯ ಸಹೋದರಿ ಭವ್ಯಾ ಗೌಡ ದೂರು ನೀಡಿದ್ದಾರೆ‌.

ಪ್ರೇಮಾ ದೂರೇನು?: ಇತ್ತ, ಕಾವ್ಯ ಗೌಡ ಮತ್ತವರ ಕಡೆಯವರೇ ನಮ್ಮ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಕಸಿದುಕೊಂಡಿದ್ದಾರೆ ಎಂದು ಪ್ರೇಮಾ ದೂರು ನೀಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version