Updated By: Priyalachhi

ಶಿವಮೊಗ್ಗ: ನನ್ನ ಕುತ್ತಿಗೆಯನ್ನು ಕೊಯ್ದರೂ ಹಿಂದುತ್ವವನ್ನು ಮಾತ್ರ ಬಿಡುವುದಿಲ್ಲ ಎಂದು ಹೇಳಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷಕ್ಕೆ ವಾಪಸ್ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಎಸ್ ಈಶ್ವರಪ್ಪ, ‘ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಪಕ್ಷದಲ್ಲಿ ಪರಿವರ್ತನೆ ಆಗಬೇಕು ಎಂದು ನಾನು ಹೊರಗೆ ಬಂದಿದ್ದೇನೆ.

ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್‌ ಮನಸ್ಸಲ್ಲೂ ಇದೆ ವಿಚಾರ ಇದೆ ಎಂದಿದ್ದಾರೆ.

ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಡಲ್ಲ

ಇದೇ ವೇಳೆ ಹಿಂದುತ್ವದ ಕುರಿತು ಮಾತನಾಡಿದ ಈಶ್ವರಪ್ಪ, ‘ನಮ್ಮ ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಟ್ಟು ಬೇರೆ ಕಡೆ ಹೋಗಲ್ಲ. ಇವತ್ತಲ್ಲ ನಾಳೆ ಪಕ್ಷಕ್ಕೆ ಒಳ್ಳೆಯ ಸ್ಥಿತಿ ಬರುತ್ತೆ. ಬಿಜೆಪಿ ಪಾದಯಾತ್ರೆ ವಿಚಾರಕ್ಕೂ ನನಗೇನೂ ಸಂಬಂಧ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version