Updated By: Priyalachhi 

ಬೆಂಗಳೂರು: ಕೇರಳ ಸಿಎಂ, ಕೇರಳ ಸರಕಾರ ಕರ್ನಾಟಕ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದ್ದೇನೆಯೇ ಹೊರತು, ಕೇರಳಿಗರ ಬಗ್ಗೆ ನಾನು ಮಾತನಾಡಿಲ್ಲ. ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ನನ್ನ ಹೇಳಿಕೆಯನ್ನು ತಿರುಚುತ್ತಿದ್ದು, ಜನರ ದಾರಿ ತಪ್ಪಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಕೇರಳ ಜನ ನನ್ನನ್ನು ಬಹಳ ಪ್ರೀತಿಸುತ್ತಾರೆ. ನನಗೂ ಅವರ ಮೇಲೆ ಗೌರವವಿದೆ. ಕೇರಳ ಚುನಾವಣೆ ಪ್ರಚಾರಕ್ಕೆ ನಾನು ಹೋಗುತ್ತೇನೆ. ಅಲ್ಲಿ ನಮ್ಮ ಸರ್ಕಾರ ಬರಲಿದೆ. ಹೀಗಾಗಿ ಬಿಜೆಪಿಯವರು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಬಿಜೆಪಿಗರು ಈ ರೀತಿ ಹುಳಿ ಹಿಂಡುವ ಕೆಲಸ ಮಾಡಬಾರದು. ನಮ್ಮ ಪಕ್ಷದ ನಾಯಕರು ನಮಗೆ ಸಲಹೆ ನೀಡಿದ್ದು, ನಾವು ಅದನ್ನು ಸ್ವೀಕರಿಸುತ್ತೇವೆ ಎಂದು ಹೇಳಿದರು.

ಇಂದು ಕರ್ನಾಟಕ ನೀರಾವರಿ ನಿಗಮ ಹಾಗೂ ಕೃಷ್ಣ ಭಾಗ್ಯ ಜಲ ನಿಗಮದ ನಿರ್ದೇಶಕರ ಮಂಡಳಿ ಸಭೆ ಮಾಡಿದೆವು. ಈ ನಿಗಮಗಳಲ್ಲಿ 5 ಸಾವಿರ ಕೋಟಿ ರೂಪಾಯಿಯಷ್ಟು ಕಾಮಗಾರಿ ತೆಗೆದುಕೊಳ್ಳುತ್ತಿದ್ದೇವೆ. ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ನಾವು ಯುಕೆಪಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಇದಕ್ಕೆ 70 ಸಾವಿರ ಕೋಟಿ ಹಣ ನೀಡಬೇಕಾಗಿದೆ. ಹೀಗಾಗಿ ಇತರೆ ಕೆಲಸಗಳನ್ನು ಮುಂದಿನ ಹಂತದಲ್ಲಿ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version