ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿರುವ ಆಂತರಿಕ ಹೋರಾಟಕ್ಕೆ ಅಂತ್ಯ ಹಾಡಿರುವ ಕಾಂಗ್ರೆಸ್, ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿದೆ.

ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ಇತರರು ಭಾಗವಹಿಸಲಿದ್ದಾರೆ.

ಹಿರಿಯ ನಾಯಕರಾದ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರ ನಡುವಿನ ತೀವ್ರ ತ್ರಿಕೋನ ಸ್ಪರ್ಧೆಗೆ ಒಂಬತ್ತು ದಿನಗಳ ನಂತರ ಅಂತಿಮ ತೀರ್ಮಾನ ಹೊರಬೀಳಲಿದೆ.

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ನಿರ್ಣಾಯಕ ಸಭೆಯ ನಂತರ ಮುಖ್ಯಮಂತ್ರಿ ಅಭ್ಯರ್ಥಿಯ ಘೋಷಣೆ ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು, 40 ನಿಮಿಷಗಳಿಗೂ ಹೆಚ್ಚು ಕಾಲ ನಡೆದ ಸಭೆಯ ನಂತರ ಮಾತನಾಡಿದ, ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಗುರುವಾರ ಘೋಷಿಸಲಾಗುವುದು ಎಂದು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version