• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ

Sambrama Prabha News by Sambrama Prabha News
December 30, 2025
in Politics
0
ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ

Updated By: Priyalachhi 

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು. ಕೋಗಿಲುಯಿಂದ 7 ಕಿಮೀ ವ್ಯಾಪ್ತಿಯಲ್ಲೇ ಬದಲಿ ಮನೆ ಕೊಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ನಿರ್ಮಾಣ ತೆರವು ಸಂಬಂಧ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಿದರು. ಮುಂದೆ ಸರ್ಕಾರದ ಜಮೀನು ಅಕ್ರಮ ಒತ್ತುವರಿ ಆದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ವಹಿಸಲಾಗುವುದು. ಜನವರಿ 1 ರ ಹೊಸ ವರ್ಷದಂದೇ ಶೆಡ್ ಕಳೆದುಕೊಂಡವರಿಗೆ ಹೊಸ ಮನೆ ಹಂಚಿಕೆ ಮಾಡಲಾಗುವುದು. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅವರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದರು.

ಇದು ಕೋಗಿಲುಯಿಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು ₹11.20 ಲಕ್ಷ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎ ಇಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಜನರಲ್‌ಗೆ ಎಲ್ಲಾ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿ ಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಜನರಲ್‌ಗೆ 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡತಕ್ಕಂತದ್ದು. ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ ಕೊಡಿಸಲಾಗುತ್ತದೆ ಎಂದು ತಿಳಿಸಿದರು.

ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್​ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು. ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕೂಡ ಅಧಿಕಾರಿಗಳ ಜೊತೆ ಭೇಟಿ ನೀಡಿದ್ದಾರೆ ಎಂದರು.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶೀಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನು ಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬ ಎಚ್ಚರಿಕೆ ನೀಡಿದರು.

Tags: ಸಿಎಂ ಸಿದ್ದರಾಮಯ್ಯ
Previous Post

ಮಂಗಳವಾರದ ಪಂಚಾಂಗ, ಭವಿಷ್ಯ

Next Post

ಡೆತ್ ನೋಟ್ ಬರೆದಿಟ್ಟು ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ

Next Post
ಡೆತ್ ನೋಟ್ ಬರೆದಿಟ್ಟು ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.