BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

ಕೋಗಿಲು ಲೇಔಟ್​​ಗೆ ಡಿ.ಕೆ ಶಿವಕುಮಾರ್ ಭೇಟಿ

Author Picture
Published On: December 29, 2025

—Advertisement—

Updated By: Priyalachhi 

ಬೆಂಗಳೂರು: ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವ ಕೋಗಿಲು ಫಕೀರ್ ಲೇಔಟ್​​ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿದ್ದು, “ಭೂ ಕಳ್ಳರ” ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇಂದು ಯಲಹಂಕ ಬಳಿಯ ಕೋಗಿಲು ಲೇಔಟ್ ನಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಸರ್ಕಾರ 9-10 ವರ್ಷಗಳಿಂದ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದು, ಇಲ್ಲಿ ಕಸದ ಗುಂಡಿ ಇತ್ತು. ಆದರೆ ಅದರ ಮೇಲೆಯೇ ಕೆಲವರು ರಾತ್ರೋರಾತ್ರಿ ಬಂದು ಶೆಡ್ ನಿರ್ಮಿಸಿದ್ದಾರೆ ಎಂದರು.

ಯಾರೂ ಸಹ ಸರ್ಕಾರಿ ಭೂಮಿಗೆ ಮತದಾರರ ಚೀಟಿ ನೀಡಿಲ್ಲ. ಸ್ಥಳೀಯ ಶಾಸಕರು ಅದನ್ನು ತಮ್ಮ ಗಮನಕ್ಕೂ ತಂದಿದ್ದಾರೆ ಎಂದರು.

“ಅವರು ಕಸದ ರಾಶಿಯ ಮೇಲೆ ಎಲ್ಲಾ ಮನೆಗಳನ್ನು ನಿರ್ಮಿಸಿದ್ದಾರೆ, ಕೆಲವರು ರಾಜಕೀಯ ಮಾಡುತ್ತಿದ್ದಾರೆ… ಕೇರಳ ಸರ್ಕಾರ ಅಲ್ಪಸಂಖ್ಯಾತರಿಗೆ ಸಹಾನುಭೂತಿ ತೋರಿಸಲು ಹೊರಟಿದೆ, ಆದರೆ ಇಲ್ಲಿನ ನಿವಾಸಿಗಳು ನನ್ನ ಕಂಡ ಕೂಡಲೇ ಜೈಕಾರ ಹಾಕಿದರು. ನಮ್ಮದು ತಪ್ಪು ಇದ್ದರೆ ಧಿಕ್ಕಾರ ಕೂಗಬೇಕಿತ್ತು ಅಲ್ವಾ. ಯಾರಿಗೆ ತೊಂದರೆ ಆಗಿದೆಯೋ ಅವರಿಗೆ ನ್ಯಾಯ ಒದಗಿಸುತ್ತೇವೆ” ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp