Updated By: Priyalachhi

ಭಾರತದಲ್ಲಿ ಎರಡು ದಿನಗಳ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲಾಗುತ್ತದೆ, ಒಂದು ಸ್ವಾತಂತ್ರ್ಯ ದಿನ ಮತ್ತೊಂದು ಗಣರಾಜ್ಯೊತ್ಸವ ದಿನ. ಸ್ವಾತಂತ್ರ್ಯ ದಿನದಂದು ಪ್ರಧಾನ ಮಂತ್ರಿಗಳು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರೆ, ರಾಷ್ಟ್ರಪತಿಗಳು ರಾಜಪಥದಲ್ಲಿ ಧ್ವಜಾರೋಹಣ ನೆರವೇರಿಸುತ್ತಾರೆ.

ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳೇ ಏಕೆ ಧ್ವಜಾರೋಹಣ ನೆರವೇರಿಸುತ್ತಾರೆ, ಪ್ರಧಾನಮಂತ್ರಿಗಳೇಕೆ ಹಾರಿಸುವುದಿಲ್ಲ ಎಂಬ ಪ್ರಶ್ನೆಗಳು ಹಲವರಲ್ಲಿ ಮೂಡುವುದುಂಟು. ಈ ಬಗ್ಗೆ ಈ ಸುದ್ದಿಯಲ್ಲಿ ಮಾಹಿತಿಯಿದೆ…

ಆಗಸ್ಟ್ 15 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ ಮತ್ತು ಜನವರಿ 26 ನಮ್ಮ ಭಾರತೀಯ ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನ. ಆಗಸ್ಟ್ 15 ಸ್ವಾತಂತ್ರ್ಯ ದಿನವೆಂದೂ ಮತ್ತು ಜನವರಿ 26ರಂದು ಗಣರಾಜ್ಯೋತ್ಸವ ಎಂದು ಕರೆಯಲಾಗುತ್ತದೆ.

ಮಾತ್ರವಲ್ಲ ಈ ಎರಡು ದಿನಗಳು ಕೂಡ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಹಾಗಾದರೆ, ನಿಮಗೆ ಈ ಎರಡು ದಿನಗಳ ನಡುವಿನ ವ್ಯತ್ಯಾಸವೇನೆಂಬುದು ನಿಮಗೆ ಗೊತ್ತಾ?

ಆಗಸ್ಟ್ 15 ರ ಸ್ವಾತಂತ್ರ್ಯ ದಿನದಂದು, ಧ್ವಜವನ್ನು ಕೆಳಗಿನಿಂದ ಹಗ್ಗದಿಂದ ಎಳೆಯಲಾಗುತ್ತದೆ, ನಂತರ ಅದನ್ನು ತೆರೆಯಲಾಗುತ್ತದೆ ಮತ್ತು ಹಾರಿಸಲಾಗುತ್ತದೆ. 15 ಆಗಸ್ಟ್ 1947 ರ ಐತಿಹಾಸಿಕ ಘಟನೆಯನ್ನು ಗೌರವಿಸಲು ಇದನ್ನು ಮಾಡಲಾಗುತ್ತದೆ. ಸಂವಿಧಾನದಲ್ಲಿ ಇದನ್ನು ಧ್ವಜಾರೋಹಣ ಎಂದು ಕರೆಯಲಾಗುತ್ತದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version