Updated By: Priyalachhi 

ಬೆಂಗಳೂರು: ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕನ್ನು ರಕ್ಷಿಸಲು AICC ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ “ನರೇಗಾ ಉಳಿಸಿ” ಜನಾಂದೋಲನ ಆಯೋಜಿಸುವ ಕುರಿತಂತೆ ಹೋಟೆಲ್ ಅಶೋಕದಲ್ಲಿ ನಡೆದ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮಾತನಾಡಿದರು. ಈ ವೇಳೆ ವಿಶೇಷ ವಿಧಾನಮಂಡಲ ಅಧಿವೇಶನ ಕರೆಯುವುದಾಗಿ ತಿಳಿಸಿದ್ದಾರೆ.

ಇದು ಬಿಜೆಪಿಯವರ ಹುನ್ನಾರ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು. ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು ಎಂದು ವಿವರಿಸಿದರು.

ಈ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಇಲ್ಲವಾಗಿಸಿದೆ. ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ. 28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version