BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಚಳಿಗಾಲದಲ್ಲಿ ಮಾರ್ನಿಂಗ್ ವಾಕಿಂಗ್ ಮಾಡುವುದು ಉತ್ತಮವೇ?

Author Picture
Published On: January 6, 2026

—Advertisement—

Updated By: Priyalachhi 

ಬೆಳಗಿನ ವಾಕಿಂಗ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಯಮಿತ ವಾಕಿಂಗ್​​ನಿಂದ ಮಧುಮೇಹ ಹಾಗೂ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ ಎಂದು ಹಲವು ಅಧ್ಯಯನಗಳು ತಿಳಿಸಿವೆ. ಚಳಿಗಾಲದ ತಂಪಾದ ವಾತಾವರಣದಲ್ಲಿ ನಡೆಯುವುದು ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಬೇಸಿಗೆಯಲ್ಲಿ ಬೆಳಗಿನ ವಾಕಿಂಗ್​ ಮಾಡುವ ಅಭ್ಯಾಸವಿರುವವರು ಕಠಿಣ ಚಳಿಗಾಲದಲ್ಲಿ ಬೆಳಗಿನ ವಾಕಿಂಗ್​ ಮಾಡುವಾಗ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಶ್ವಾಸಕೋಶಶಾಸ್ತ್ರಜ್ಞ ಡಾ.ವೆಂಕಟೇಶ್ ತಿಳಿಸುತ್ತಾರೆ. ಚಳಿಗಾಲದಲ್ಲಿ ಬೆಳಗಿನ ವಾಕಿಂಗ್​ಗೆ ಹೋಗಲು ಯಾವೆಲ್ಲಾ ಮುನ್ನಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು? ಚಳಿಗಾಲದ ತಂಪಾದ ಗಾಳಿಯು 50ವರ್ಷಕ್ಕಿಂತ ಮೇಲ್ಪಟ್ಟ ಜನರ ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಬಹುದು. ಇದರಿಂದ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಸೂರ್ಯೋದಯದ ನಂತರ ಹೊರಗೆ ಹೋಗುವುದು ಉತ್ತಮ. ಹೊರಗೆ ಹೋಗುವ ಮೊದಲು ಮನೆಯಲ್ಲಿ ಕೆಲವು ಉಸಿರಾಟದ ವ್ಯಾಯಾಮಗಳನ್ನು ಮಾಡುವುದು ಸಹ ಒಳ್ಳೆಯದು. ನಡೆಯುವಾಗ ಎದೆ ನೋವು, ಅತಿಯಾದ ಬೆವರುವಿಕೆ, ವಿಶ್ರಾಂತಿಯ ಸಮಯದಲ್ಲಿ ಉಸಿರಾಟದ ತೊಂದರೆ, ಆಯಾಸ ಹಾಗೂ ನಿದ್ರಾಹೀನತೆ ವಿವಿಧ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಚಳಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು, ಮಾಸ್ಕ್, ಟೋಪಿ, ಸಾಕ್ಸ್ ಹಾಗೂ ಕೈಗವಸುಗಳನ್ನು ಧರಿಸುವುದು ಉತ್ತಮ. ನಡೆಯುವಾಗ ದಪ್ಪ, ಸಡಿಲವಾದ ಬಟ್ಟೆಗಳನ್ನು ಧರಿಸುವುದು ಸಹ ಸೂಕ್ತವಾಗಿದೆ. ಇದರೊಂದಿಗೆ ಅನಾರೋಗ್ಯದಿಂದ ಬಳಲುತ್ತಿರುವವರು ಸೂರ್ಯೋದಯಕ್ಕೆ ಮೊದಲು ಶೀತದಲ್ಲಿ ವಾಕಿಂಗ್​ ಮಾಡಬಾರದು ಎಂದು ಸಲಹೆ ನೀಡುತ್ತಾರೆ. ಶೀತದಲ್ಲಿ ನಡೆಯಲು ಹೋಗುವ ಮೊದಲು ಬೆಚ್ಚಗಿನ ಬಟ್ಟೆಗಳು, ದೇಹವನ್ನು ಬೆಚ್ಚಗಾಗಿಸುವ ಆಹಾರಗಳು, ಬೆಚ್ಚಗಾಗುವ ವ್ಯಾಯಾಮಗಳತ್ತ ಗಮನಹರಿಸಿ ಹಾಗೂ ಹೈಡ್ರೇಟ್​ ಆಗಿರಿಸಲು ಬಿಸಿನೀರು ಇಲ್ಲವೇ ಚಹಾವನ್ನು ನಿಮ್ಮೊಂದಿಗೆ ಕೊಂಡೊಯ್ಯಿರಿ. ಇದು ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ. ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ಶೀತದಲ್ಲಿಯೂ ಬೆಳಗಿನ ನಡಿಗೆಯನ್ನು ಆರಾಮದಾಯಕವಾಗಿಸುತ್ತದೆ ಎಂದು ತಜ್ಞರು ವಿವರಿಸುತ್ತಾರೆ.

WINTER HEALTH PROBLEMS  WINTER MORNING WALK  WINTER WALKING PRECAUTIONS  ಚಳಿಗಾಲದಲ್ಲಿ ಮಾರ್ನಿಂಗ್ ವಾಕಿಂಗ್

ಚಳಿಗಾಲದಲ್ಲಿ ಬೆಳಗಿನ ವಾಕಿಂಗ್​ ಮಾಡುವುದರಿಂದ ಆಗುವ ತೊಂದರೆಗಳೇನು?

  • ಚಳಿಗಾಲದ ಬೆಳಗಿನ ಸಮಯವು ಹೃದಯರಕ್ತನಾಳ ವ್ಯವಸ್ಥೆಗೆ ಸವಾಲುಗಳನ್ನು ಒಡ್ಡುತ್ತದೆ.
  • ಚಳಿಯ ವಾತಾವರಣವು ಉಸಿರಾಟದ ತೊಂದರೆ, ಎದೆಯ ಬಿಗಿತ, ಆಯಾಸಕ್ಕೆ ಕಾರಣವಾಗಬಹುದು, ಇದನ್ನು ಹಗುರವಾಗಿ ಪರಿಗಣಿಸಬಾರದು.
  • ಚಳಿಯ ವಾತಾವರಣವು ರಕ್ತನಾಳಗಳನ್ನು ಕಿರಿದಾಗಿಸಲು ಕಾರಣವಾಗುತ್ತದೆ. ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಹಾಗೂ ಹೃದಯವು ಕಾರ್ಯನಿರ್ವಹಿಸಲು ಕಷ್ಟವಾಗುತ್ತದೆ.
  • ಹೃದಯ ಕಾಯಿಲೆಯ ಅಪಾಯವು ಸಾಮಾನ್ಯವಾಗಿ ಬೆಳಿಗ್ಗೆ ಹೆಚ್ಚಾಗಿರುತ್ತದೆ, ಚಳಿಯ ಹವಾಮಾನವು ಈ ಅಪಾಯವನ್ನು ಇನ್ನಷ್ಟು ಹೆಚ್ಚಿಸುತ್ತದೆ.
  • ಕಡಿಮೆ ತಾಪಮಾನವು ಹೃದಯದಲ್ಲಿನ ರಕ್ತನಾಳಗಳನ್ನು ಕಿರಿದಾಗಿಸಲು ಕಾರಣವಾಗುತ್ತದೆ. ರಕ್ತದ ಹರಿವಿನ ಮೇಲೆ ಪರಿಣಾಮ ಬೀರುತ್ತದೆ. ಹೃದಯವನ್ನು ತಲುಪುವ ಆಮ್ಲಜನಕದ ಪ್ರಮಾಣವನ್ನು ಸಹ ಕಡಿಮೆ ಮಾಡುತ್ತದೆ. ಇದರ ಪರಿಣಾಮವಾಗಿ ಹೃದಯವು ಹೆಚ್ಚು ಕೆಲಸ ಮಾಡಬೇಕಾಗುತ್ತದೆ. ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.
  • ಚಳಿಗಾಲದ ತಿಂಗಳುಗಳಲ್ಲಿ ಪಾರ್ಶ್ವವಾಯು ಮತ್ತು ಗಂಟಲು ನೋವು ಬರುವ ಅಪಾಯ ಹೆಚ್ಚು ಎಂದು ಸಂಶೋಧನೆ ತಿಳಿಸಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp