Updated By: Priyalachhi

ಚಿತ್ರದುರ್ಗ: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 11ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.

ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ನಡುವೆ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ದುರ್ಘಟನೆ ಸಂಭವಿಸಿದೆ.

ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್​ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ.

ದುರಂತದಲ್ಲಿ 11 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್​ನಲ್ಲಿ ಸುಮಾರು 32 ಮಂದಿ ಪ್ರಯಾಣಿಕರು ಇದ್ದರು ಎಂದು ವರದಿಗಳಿಂದ ತಿಳಿದುಬಂದಿದೆ.

ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version