Updated By: Priyalachhi

ಬೆಳಗಾವಿ: ರಾಜ್ಯ ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಗಳನ್ನು ನಡೆಸಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.

ಗುರುವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಲು ಕೆಲ ಷರತ್ತುಗಳ ಅನ್ವಯ ಅನುಮತಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಜನಾಭಿಪ್ರಾಯ ಸಂಗ್ರಹದ ಜೊತೆಗೆಯಲ್ಲಿ ನಿಯಮಗಳನ್ನು ರೂಪಿಸಲು ಗೃಹ ಸಚಿವರಿಗೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಕಾಲ್ತುಳಿತ ದುರಂತ ಬಳಿಕ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆದಿರಲಿಲ್ಲ. ಆದರೆ, ಇದೀಗ ನಿವೃತ್ತ ನ್ಯಾ. ಮೈಕಲ್‌ ಡಿ ಕುನ್ಹಾ ವರದಿ ಆಧರಿಸಿ ಷರತ್ತುಗಳ ಅನ್ವ. ಕ್ರಿಕೆಟ್‌ ಪಂದ್ಯಗಳನ್ನು ಆಡಿಸಲು ಸರ್ಕಾರ ಅನುಮತಿ ನೀಡಿದ್ದು, ಭದ್ರತೆ ಜವಾಬ್ದಾರಿಯನ್ನು ಗೃಹ ಇಲಾಖೆಗೆ ನೀಡಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version