Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಜನಗಣತಿ ವೇಳೆ ಸಾರ್ವಜನಿಕರು ನಿಖರ ಮಾಹಿತಿ ನೀಡಿ
Politics Latest News

ಜನಗಣತಿ ವೇಳೆ ಸಾರ್ವಜನಿಕರು ನಿಖರ ಮಾಹಿತಿ ನೀಡಿ

Sambrama Prabha NewsBy Sambrama Prabha NewsApril 2, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಮೈಸೂರು: ಜನಗಣತಿಯಿಂದ ಜನರ ಜೀವನದ ಸ್ಥಿತಿಗತಿಗಳನ್ನು ತಿಳಿದುಕೊಳ್ಳಲು ಅನುಕೂಲವಾಗಿದ್ದು, ಇದರಿಂದ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿದೆ. ಸಾರ್ವಜನಿಕರು ಜನಗಣತಿಯ ಗಣತಿದಾರರಿಗೆ ನಿಖರ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮನವಿ ಮಾಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ‌ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಜನಗಣತಿಯು ಎರಡು ಹಂತದಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆ ಪಟ್ಟಿ ಅಥವಾ ಮನೆ ಸರ್ವೆ ಎಪ್ರಿಲ್ 1ರಿಂದ ಮೇ 15ರವರೆಗೆ ಇರಲಿದೆ. ಎರಡನೇ ಹಂತದ ವ್ಯಕ್ತಿವಾರು ಸರ್ವೆ ಮೇ ತಿಂಗಳಲ್ಲಿ ನಡೆಯಲಿದೆ ಎಂದರು.

ಎಪ್ರಿಲ್‌ 1ರಿಂದ 15ರವರೆಗೆ ಸಾರ್ವಜನಿಕರು ಸ್ವಯಂ ಗಣತಿಗಾಗಿ ವೆಬ್​​ಸೈಟ್ ವಿಳಾಸ www.se.census.gov.in ಬಳಸಿಕೊಂಡು ಲಾಗ್ ಇನ್ ಆಗಿ, ಮನೆಗಳ ಪಟ್ಟಿ ಮತ್ತು ವಸತಿ ಗಣತಿ ಸಂಬಂಧ ಕೇಳಲಾಗುವ 33 ಪ್ರಶ್ನೆಗಳಿಗೆ ಉತ್ತರಿಸಬಹುದಾಗಿದೆ. ಸಾರ್ವಜನಿಕರು‌ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಡಿಸಿ ಮನವಿ ಮಾಡಿದರು.

ಮನೆ ಮನೆ ಜನಗಣತಿಗಾಗಿ ಜಿಲ್ಲೆಯಲ್ಲಿ 6,013 ಬ್ಲಾಕ್ ರಚಿಸಲಾಗಿದ್ದು, 6,540 ಗಣತಿದಾರರು ಹಾಗೂ 1,207 ಮೇಲ್ವಿಚಾರಕರು ಸೇರಿದಂತೆ ಒಟ್ಟು 7,748 ಸಿಬ್ಬಂದಿಯನ್ನು ನಿಯೋಜಿಸಿ ಅವರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜನರ ಆರ್ಥಿಕ ಚಟುವಟಿಕೆ, ಸಾಕ್ಷರತೆ, ಶಿಕ್ಷಣ, ವಸತಿ, ಗೃಹ ಸೌಲಭ್ಯ, ನಗರೀಕರಣ, ಫಲವತ್ತತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಭಾಷೆ, ಧರ್ಮ, ವಲಸೆ, ಅಂಗವೈಕಲ್ಯ ಮತ್ತು ಇತರೆ ಹಲವು ಸಾಮಾಜಿಕ ಸಾಂಸ್ಕೃತಿಕ ದತ್ತಾಂಶ ಪಡೆಯುವುದು ಜನಗಣತಿಯ ಉದ್ದೇಶವಾಗಿದೆ. ಜನಗಣತಿಯಲ್ಲಿ ಗಣತಿದಾರರು ನಿಗದಿಪಡಿಸಿರುವ 33 ಪ್ರಶ್ನೆಗಳನ್ನು ಜನರಿಗೆ ಕೇಳಿ ಮಾಹಿತಿ ಸಂಗ್ರಹಿಸಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು ಜನಗಣತಿ ಕಾರ್ಯದಲ್ಲಿ ಸ್ವಯಂಪ್ರೇರಿತವಾಗಿ ಪಾಲ್ಗೊಂಡು ಜನಗಣತಿಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಜನಗಣತಿ
Add as Preferred on Google Follow on Google News
Share. WhatsApp Facebook Twitter Telegram
Previous Articleನಾಸಾದ ಆರ್ಟೆಮಿಸ್ II ಉಡಾವಣೆ ಯಶಸ್ವಿ
Next Article ಚಿನ್ನ, ಬೆಳ್ಳಿ ಆಭರಣಗಳ ಆಮದುಗಳ ಮೇಲೆ ನಿರ್ಬಂಧ ವಿಧಿಸಿದ ಕೇಂದ್ರ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.