BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಜನವರಿ 22ರಿಂದ ಆರಂಭವಾಗಲಿರುವ ಜಂಟಿ ಅಧಿವೇಶನದಲ್ಲಿ ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿಎಂ

Author Picture
Published On: January 20, 2026

—Advertisement—

Updated By: Priyalachhi

ಬೆಂಗಳೂರು: ಜನವರಿ 22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಅಧಿವೇಶನದ ವೇಳೆ ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ಇದೇ ವೇಳೆ ತಿಳಿಸಿದರು. ಡಿಜಿಪಿ ರಾಮಚಂದ್ರರಾವ್ ಅವರ ವಿರುದ್ಧದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ, ಅಮಾನತು ಗೊಳಿಸಲಾಗಿದೆ ಎಂದರು.

ಜಂಟಿ ಅಧಿವೇಶನದ ಕುರಿತು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ”ಜ.22 ರಿಂದ 31ರ ವರೆಗೆ ನಡೆಯಲಿರುವ ಜಂಟಿ ಅಧಿವೇಶನವನ್ನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರಿಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ರಾಜ್ಯಪಾಲರು ಮಾಡಲಿರುವ ಭಾಷಣವನ್ನು ಅನುಮೋದಿಸಲು ಸಚಿವ ಸಂಪುಟವು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಿದೆ ಎಂದಿದ್ದರು.

ಅಲ್ಲದೇ ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಯಲಿದೆ. ನೂತನ ಕಾಯ್ದೆಯು ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ಈಗಾಗಲೇ ನಿರ್ಣಯಿಸಿದೆ. ಈ ಮೂಲಕ ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆಯನ್ನು ಸರ್ಕಾರ ಇಡಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಮ ರಾಜ್ಯದ ಜನರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ. ಸರ್ಕಾರ ಅಧಿವೇಶನ ಕರೆಯದೇ ಬಿಡಲು ಸಾಧ್ಯವಿಲ್ಲ. ಅರಿವು ಹಾಗೂ ಜಾಗೃತಿ ಮೂಡಿಸಲು ಹಾಗೂ ಕೇಂದ್ರ ಸರ್ಕಾರದ ಮೇಲೆ ಮನರೇಗಾ ಕಾಯ್ದೆಯ ಮರುಸ್ಥಾಪನೆಗಾಗಿ ಒತ್ತಡ ತರಲಾಗುವುದು” ಎಂದು ಹೇಳಿದ್ದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp