BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಜನವರಿ 5ರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ: ಸಿಎಂ

Author Picture
Published On: December 27, 2025

—Advertisement—

Updated By: Priyalachhi

ಬೆಂಗಳೂರು/ದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಿದೆ. ಇದನ್ನು ತೀವ್ರವಾಗಿ ವಿರೋಧಿಸಿ ಜನವರಿ ಐದರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕಾಂಗ್ರೆಸ್ ಪಕ್ಷದಿಂದ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ: ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್​ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದೆ. ಜನವಸತಿಗೆ ಅದು ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟಿಸ್​​ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಒದಗಿಸಲು ಇಲಾಖೆಯ ಕಾರ್ಯದರ್ಶಿ ಹಾಗೂ ಜಿಬಿಎ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದಿಂದ ಗ್ರಾಮೀಣ ಆರ್ಥಿಕ ಭದ್ರತೆ ನಾಶ – ಸಚಿನ್ ಪೈಲಟ್: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಟೀಕಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp