• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್

Sambrama Prabha News by Sambrama Prabha News
May 18, 2026
in Crime News, Home, Latest News
0
ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆದಾಗ್ಯೂ, ವದಂತಿ ಹರಡುತ್ತಿದ್ದಂತೆ ಜೈಲಿನ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು ಮತ್ತು ವರದಿಗಳು ಕೇವಲ ವದಂತಿ ಎಂದು ದೃಢಪಡಿಸಿದರು.

ಭಾನುವಾರ ರಾತ್ರಿಯಿಂದಲೇ ಈ ರೀತಿ ವದಂತಿಗಳು ಹರಡುತ್ತಿವೆ. ಇದರಿಂದಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಿರ ದೂರವಾಣಿ ಮೂಲಕ ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕೇಳುತ್ತಿದ್ದಾರೆ ಎಂದು ಹಿರಿಯ ಜೈಲು ಸಿಬ್ಬಂದಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

“ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳು ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿವೆ. ಅಂತಹ ವದಂತಿಗಳನ್ನು ನಂಬಿ ಯಾರೂ ಪರಪ್ಪನ ಅಗ್ರಹಾರ ಕೇಂದ್ರ ಜೈಲಿನ ಬಳಿ ಬರಬಾರದು ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ನಟ ದರ್ಶನ್ ಅವರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಬಹುದು. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆಯ ಅಗತ್ಯವಿದೆ ಎಂದು ಮೈಸೂರಿನ ಮನರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ಹೇಳಿದ್ದರು. ಇದೀಗ ಆಘಾತಕಾರಿ ವದಂತಿ ಹರಡಿದ್ದು, ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

Tags: ನಟ ದರ್ಶನ್
Previous Post

ಇಂಧನ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ: HD ಕುಮಾರಸ್ವಾಮಿ ಸಮರ್ಥನೆ

Next Post

ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ

Next Post
ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ

ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.