BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ದೀರ್ಘಾವಧಿ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಲು ‘ದಾಖಲೆ’ರಾಮಯ್ಯ ಸಜ್ಜು

Author Picture
Published On: January 6, 2026

—Advertisement—

Updated By: Priyalachhi 

ಮೈಸೂರು: ಸಿದ್ದರಾಮಯ್ಯ 40 ವರ್ಷದ ರಾಜಕೀಯ ಜೀವನದಲ್ಲಿ ಬೇಕಾದಷ್ಟು ಚಾಲೆಂಜ್‌ ಎದುರಿಸಿದ್ದಾರೆ. ಅಗ್ನಿ ಪರೀಕ್ಷೆಗಳನ್ನ ನೋಡಿದ್ದಾರೆ. ನಾಯಕತ್ವದ ಪ್ರಶ್ನೆ ಸಂಭಾವ್ಯ ಸಚಿವ ಸಂಪುಟ ಪುನರ್ರಚನೆ ಕುರಿತು ಮುಂದುವರಿದ ಊಹಾಪೋಹಗಳ ನಡುವೆ, ಬುಧವಾರ ಸಿದ್ದರಾಮಯ್ಯ ಅವರು ಕರ್ನಾಟಕದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ.

ಬೆಂಗಳೂರಿನಲ್ಲಿ ರಾಜಕೀಯ ವಲಯಗಳು ಅನಿಶ್ಚಿತತೆಯಿಂದ ತುಂಬಿದ್ದರೂ, ಅವರ ತವರು ಮೈಸೂರು ಜಿಲ್ಲೆಯಲ್ಲಿ ಸಂಭ್ರಮಾಚರಣೆಯ ವಾತಾವರಣ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸಾಮಾಜಿಕ ನ್ಯಾಯದ ಹರಿಕಾರರಾಗಿ ಗುರುತಿಸಿಕೊಂಡಿದ್ದ ದೇವರಾಜ​ ಅರಸು 2,789 ದಿನಗಳು, ಅಂದರೆ 7 ವರ್ಷ 239 ದಿನ (ಎರಡು ಅವಧಿಗೆ) ಮುಖ್ಯಮಂತ್ರಿ ಆಗಿದ್ದರು. ಈ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿದ್ದಾರೆ.

ಅರಸು​ ಅವರು 1972ರ ಮಾರ್ಚ್​ 20ರಿಂದ 1980 ಜನವರಿ 7ರವರೆಗೆ ಸತತ ಏಳೂವರೆ ವರ್ಷ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಸಿದ್ದರಾಮಯ್ಯ 2013ರಿಂದ 2018ರ ಅವಧಿಯಲ್ಲಿ ಮೊದಲ ಬಾರಿ 1,829 ದಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದರು. 2023ರ ಮೇ 20ರಿಂದ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಮುಖ್ಯಮಂತ್ರಿಯ ಅಧಿಕಾರಾವಧಿ ಲೆಕ್ಕ ಮಾಡುವಾಗ ಪ್ರಮಾಣವಚನ ಸ್ವೀಕರಿಸಿದ ದಿನದಿಂದ ಪರಿಗಣಿಸಲಾಗುತ್ತದೆ ಎಂದು ವಿಧಾನಸಭೆ ಸಚಿವಾಲಯದ ಮೂಲಗಳು ತಿಳಿಸಿವೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp