Updated By: Priyalachhi

ನಟ ರಣವೀರ್ ಸಿಂಗ್ ಅವರು ಇತ್ತೀಚೆಗೆ ವಿವಾದ ಒಂದನ್ನು ಮಾಡಿಕೊಂಡಿದ್ದರು. ದೈವವನ್ನು ಅವರು ದೆವ್ವ ಎಂದು ಕರೆದರು. ಅಷ್ಟೇ ಅಲ್ಲ, ದೈವವನ್ನು ಅನುಕರಿಸಲು ಹೋಗಿ ಹೀಯಾಳಿಸಿದಂತೆ ಕಾಣಿಸಿದೆ. ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಈ ಘಟನೆ ನಡೆಯಿತು. ಅಲ್ಲಿಯೇ ಕುಳಿತಿದ್ದ ರಿಷಬ್ ಶೆಟ್ಟಿಗೂ ಸಾಕಷ್ಟು ಮುಜುಗರ ತಂದಿತ್ತು. ಈಗ ಅಮೇಜಾನ್ ಪ್ರೈಮ್ ವಿಡಿಯೋ ಈ ಬಗ್ಗೆ ಪೋಸ್ಟ್ ಮಾಡಿದೆ. ಈ ಮೂಲಕ ರಣವೀರ್ ಸಿಂಗ್​ಗೆ ಕೌಂಟರ್ ಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದ ಸಮಾರೋಪ ಸಮಾರಂಭ ನಡೆಯುತ್ತಿತ್ತು. ರಣವೀರ್ ಸಿಂಗ್ ಅವರು ತಮ್ಮ ‘ಧುರಂದರ್’ ಸಿನಿಮಾ ಪ್ರಚಾರ ಮಾಡಲು ಅಲ್ಲಿಗೆ ಬಂದಿದ್ದರು. ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version