Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಧನುರ್ಮಾಸ ಆರಂಭ: ಲಕ್ಷ್ಮಿ ನಾರಾಯಣರ ಅನುಗ್ರಹ ಪಡೆಯುವುದು ಹೇಗೆ?
Home

ಧನುರ್ಮಾಸ ಆರಂಭ: ಲಕ್ಷ್ಮಿ ನಾರಾಯಣರ ಅನುಗ್ರಹ ಪಡೆಯುವುದು ಹೇಗೆ?

Sambrama Prabha NewsBy Sambrama Prabha NewsDecember 16, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಸೂರ್ಯ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಬೇಕಾದರೆ ಒಂದು ತಿಂಗಳು ಬೇಕಾಗುತ್ತದೆ. ಅದರಂತೆಯೇ ಸೂರ್ಯ ಧನುರಾಶಿಯಲ್ಲಿ ಪ್ರವೇಶ ಮಾಡಿ ಮಕರ

ರಾಶಿಗೆ ಪ್ರವೇಶ ಮಾಡಲು ಒಂದು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಈ ಒಂದು ತಿಂಗಳನ್ನು (ಧನು ರಾಶಿ) “ಧನುರ್ಮಾಸ” ಎಂದು ಕರೆಯುತ್ತಾರೆ. ಕೃಷ್ಣನು ಭಗವದ್ಗೀತೆಯಲ್ಲಿ ಮಾಸಗಳನ್ನು ಕುರಿತು ಹೇಳುವಾಗ ಧನುರ್ಮಾಸದ ಮಹಾತ್ಮೆಗೆ ವಿಶೇಷ ಒತ್ತು ನೀಡಿದ್ದಾನೆ

ಈ ಮಾಸದಲ್ಲಿ ವಿಶೇಷವಾಗಿ ಚಳಿ ಇರುತ್ತದೆ. ಚಳಿಯ ತೀವ್ರತೆಯೆಷ್ಟು ಇರುತ್ತದೆ ಎಂದರೆ ಚಳಿಯನ್ನು ತಾಳಲಾರದೆ, ರಾತ್ರಿ ವೇಳೆ ಮನುಷ್ಯ ತನ್ನ ದೇಹವನ್ನು ಬಿಲ್ಲಿನಂತೆ ಬಾಗಿಸಿ ಮಲಗುತ್ತಾನೆ. ಮುದುರಿಕೊಳ್ಳುತ್ತಾನೆ. ಆದ್ದರಿಂದಲೇ ಈ ಮಾಸಕ್ಕೆ ಧನುರ್ಮಾಸ ಎಂದು ಕರೆಯುತ್ತಾರೆಂಬ ಪ್ರತೀತಿ ಇದೆ. ಶಾಸ್ತ್ರಗಳ ಪ್ರಕಾರ ಮಾನವರಿಗೆ ಒಂದು ವರ್ಷ – ದೇವತೆಗಳಿಗೆ ಒಂದು ದಿನ, ಧನುರ್ಮಾಸವು ದೇವತೆಗಳ ಪ್ರಭಾತ ಕಾಲ, ಅಂದರೆ ಈ ಕಾಲದಲ್ಲಿ ದೇವತೆಗಳು ಎಚ್ಚರಗೊಂಡು ಭಕ್ತರ ಪ್ರಾರ್ಥನೆಗೆ ಶೀಘ್ರ ಪ್ರತಿಕ್ರಿಯಿಸುತ್ತಾರೆ.

ಧನುರ್ಮಾಸದಲ್ಲಿ ಮಾಡಿದ ಪೂಜೆ, ವ್ರತ, ದಾನ ಸೇವೆಗಳ ಫಲ ಸಾವಿರ ಪಟ್ಟು ಹೆಚ್ಚಾಗುತ್ತದೆ ಎಂದು ಪುರಾಣಗಳು ಹೇಳುತ್ತವೆ. ಧನುರ್ಮಾಸದಲ್ಲಿ ಶ್ರೀಮಹಾವಿಷ್ಣುವಿನೊಂದಿಗೆ ಲಕ್ಷ್ಮೀ ದೇವಿ ಭೂಮಿಯಲ್ಲಿ ಸಂಚರಿಸುತ್ತಾಳೆ ಎಂದು ಶಾಸ್ತ್ರ ನಂಬಿಕೆಯಿದೆ.

ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಸ್ನಾನಾದಿಗಳನ್ನು ಮುಗಿಸಿ ದೇಗುಲಗಳಲ್ಲಿ ಮುಂಜಾನೆಯ ಪೂಜೆಯು ಆರಂಭವಾಗುತ್ತದೆ. ಸೂರ್ಯೋದಯಕ್ಕಿಂತ ಮುನ್ನವೇ ಮುಕ್ತಾಯವಾಗುವ ಮಾಸವಿದು. ದೇವತೆಗಳಿಗೆ ದಕ್ಷಿಣಾಯಣವು ರಾತ್ರಿಯ ಕಾಲ, ಉತ್ತರಾಯಣವು ಹಗಲಿನ ಕಾಲ, ಆದರೆ ಈ ಧನುರ್ಮಾಸವು ರಾತ್ರಿ ಮತ್ತು ಹಗಲು ಎರಡೂ ಸೇರಿದ ಸಮಯವೆಂದೂ, ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಿ ಯಾರು ಭಗವಂತನನ್ನು ಪೂಜಿಸಿ, ನೈವೇದ್ಯವನ್ನು ಅರ್ಪಿಸುತ್ತಾರೋ ಅವರ ಸಕಲ ಇಷ್ಟಾರ್ಥಗಳು ನೆರವೇರುತ್ತದೆ.

ಈ ಕಾರಣದಿಂದ ದೇವರಿಗೆ ವಿಶೇಷ ಅಲಂಕಾರ ಸೇವೆ, ವಿಶೇಷ ನೈವೇದ್ಯ ಸೇವೆ , ದೀಪದಾನ ಸೇವೆ , ದೇವರಿಗೆ ಅಭಿಷೇಕ ಪೂಜೆ ಅಲಂಕಾರ ಹೋಮ, ಎಲ್ಲರ ಸೇವೆಗಳನ್ನು ಮಾಡಲಾಗುತ್ತದೆ. ಧನುರ್ಮಾಸದ ವೇಳೆ ಹುಗ್ಗಿ ಸೇವೆ, ಪೊಂಗಲ್ ಸೇವೆ ಹಾಗೂ ದವಸಧಾನ್ಯ ದಾನಗಳ ಸೇವೆ ಮಾಡಿದರೆ, ಧನಸಂಪತ್ತು ವೃದ್ಧಿಯಾಗುತ್ತದೆ. ಸಾಲದ ಸಮಸ್ಯೆ ನಿವಾರಣೆ ನಿವಾರಣೆಯಾಗುತ್ತದೆ

ಧನುರ್ಮಾಸದಲ್ಲಿ ವಿಶೇಷವಾಗಿ ಮುಂಜಾನೆ ವಿಷ್ಣು ಸಹಸ್ರನಾಮ ಪಾರಾಯಣ, ಪುರುಷ ಸೂಕ್ತಂ, ಶ್ರೀ ವಿಷ್ಣು ಸೂಕ್ತಂ ಅಥವಾ ನಾರಾಯಣ ಉಪನಿಷತ್ತನ್ನು ಪಠಣ ಮಾಡಲಾಗುತ್ತದೆ. ಕೆಲವರು ಮಹಾವಿಷ್ಣುವಿನೊಂದಿಗೆ ಮಹಾಲಕ್ಷ್ಮೀಯನ್ನು ಪೂಜಿಸುತ್ತಾರೆ, ಹಿಂದೆ ದೇವ ರಾಜನಾದ ಇಂದ್ರನು ರಾಜ್ಯವನ್ನು ಕಳೆದುಕೊಂಡಾಗ ಶಚೀದೇವಿಯು ಹುಗ್ಗಿಯ ನೈವೇದ್ಯ ಮಾಡಿ ವಿಷ್ಣುವಿಗೆ ಸಮರ್ಪಿಸಿ, ಶ್ರೀಹರಿಯೊಂದಿಗೆ ಮಹಾಲಕ್ಷ್ಮಿಯನ್ನೂ ದ್ವಾದಶನಾಮಗಳಿಂದ ಸ್ತುತಿಸಿದಳಂತೆ, ಇದರ ಫಲವಾಗಿ ಇಂದ್ರನು ರಾಜ್ಯವನ್ನು ಮರಳಿ ಪಡೆದನು ಎನ್ನುವ ಪುರಾಣ ಕಥೆಯಿದೆ.

ಹುಗ್ಗಿ ಸೇವೆಯ ಮಹತ್ವ

ಹುಗ್ಗಿ ಸೇವೆ ಎಂದರೆ ಅಕ್ಕಿ, ಬೆಲ್ಲ, ತುಪ್ಪದಿಂದ ಮಾಡಿದ ಅನ್ನವನ್ನು ದೇವರಿಗೆ ಸಮರ್ಪಿಸಿ ಭಕ್ತರಿಗೆ ಅಥವಾ ಬಡವರಿಗೆ ದಾನ ಮಾಡುವುದು. ಧನುರ್ಮಾಸದಲ್ಲಿ ಮಾಡಿದ ಅನ್ನದಾನ ಅಕ್ಷಯ ಅನ್ನದ ಫಲ ನೀಡುತ್ತದೆ, ದಾರಿದ್ರ್ಯ ನಿವಾರಣೆ ಮಾಡುತ್ತದೆ ಕುಟುಂಬದ ಕಲಹಗಳನ್ನು ಶಮನಗೊಳಿಸುತ್ತದೆ ಎಂಬ ನಂಬಿಕೆಯಿದೆ. “ಅನ್ನಂ ಬ್ರಹ್ಮ” ಎಂಬ ತತ್ವವನ್ನು ಈ ಸೇವೆ ನೆನಪಿಸುತ್ತದೆ.

ಪೊಂಗಲ್ ಸೇವೆಯ ಮಹತ್ವ

ಪೊಂಗಲ್ ಸೇವೆ ವಿಶೇಷವಾಗಿ ಸೂರ್ಯ ದೇವರಿಗೆ ಕೃತಜ್ಞತೆ ಸಲ್ಲಿಸುವ ಸೇವೆಯಾಗಿದೆ. ಒಂದು ದೀಪ ಹಚ್ಚಿದರೂ ಸಹ ಸಹಸ್ರ ದೀಪದ ಫಲ ಸಿಗುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗುತ್ತದೆ.

ಧನುರ್ಮಾಸ ಪವಿತ್ರವಾದ ಮಾಸವಾದರೂ ಇದರಲ್ಲಿ ಶುಭ ಕಾರ್ಯಗಳನ್ನು ಮಾಡುವಂತಿಲ್ಲ. ಆದರೆ, ಆಧ್ಯಾತ್ಮಿಕ ಕೆಲಸಗಳನ್ನು ಮಾಡಬಹುದಾಗಿದೆ. ಧನುರ್ಮಾಸದಲ್ಲಿ ನಾವು ಈ ಕೆಲಸಗಳನ್ನು ಮಾಡುವುದರಿಂದ ಸಂತೋಷ, ಸಮೃದ್ಧಿ ಹಾಗೂ ಶಾಂತಿ ದೊರೆಯುವುದು

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಧನುರ್ಮಾಸ
Add as Preferred on Google Follow on Google News
Share. WhatsApp Facebook Twitter Telegram
Previous Articleದಾಖಲೆ ಚಳಿಗೆ ಬೆಂಗಳೂರು ಗಡಗಡ
Next Article ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’: ಡಿ. 17ರಂದು ದೆಹಲಿಯಲ್ಲಿ ಒಕ್ಕಲಿಗ ನಾಯಕರ ಸಭೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

September 2, 2026

ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row

June 15, 2026

ಐಎಎಸ್ ಬಡ್ತಿ ವಿವಾದ: ಅನರ್ಹ 7 ಅಧಿಕಾರಿಗಳ ಮುಂದುವರಿಕೆ ವಿರೋಧಿಸಿ 25 ಕೆಎಎಸ್ ಅಧಿಕಾರಿಗಳ ಬಂಡಾಯ, ಅಖಾಡಕ್ಕಿಳಿದ ಡಿಕೆಶಿ

May 23, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.