Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್
Home

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್

Sambrama Prabha NewsBy Sambrama Prabha NewsNovember 30, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರಿನ:- ಆನೇಕಲ್ ತಾಲ್ಲೂಕಿನ, ಅಭಿಲೇಖಾಲಯ (ರೆಕಾರ್ಡ್ ರೂಮ್ಸ್) ಕಾರ್ಯಾಲಯದ ಕೆಲವು ಸಿಬ್ಬಂದಿಗಳು ಭೂಗಳ್ಳರ ಜೊತೆ ಶಾಮೀಲಾಗಿ ನಕಲಿ ದಾಖಲಾತಿಗಳನ್ನು ಸೇರಿಸಿ ಸರ್ಕಾರಿ ಜಮೀನುಗಳ ಕಬಳಿಕೆಗೆ ಸಹಕರಿಸಿರುವುದು ಕಂಡುಬಂದಿದ್ದು, ಒಟ್ಟು 16 ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ತಿಳಿಸಿದ್ದಾರೆ.

ಉಪ ತಹಸಿಲ್ದಾರರಾದ ಚಂದ್ರಶೇಖರ್ ಬಿ.ಕೆ, ಶಿರಸ್ತೇದಾರರಾದ ಮಾರುತಿ ಪ್ರಸಾದ್, ದಿನಕರನ್ ಜಿ, ಲೋಕೇಶ್ ಎಸ್, ಪ್ರಥಮ ದರ್ಜೆ ಸಹಾಯಕರಾದ ಮಹೇಶ್, ಮಂಗಳ, ನಾರಾಯಣ, ದ್ವಿತೀಯ ದರ್ಜೆ ಸಹಾಯಕರಾದ ಕೆ ರಾಘವೇಂದ್ರ, ಮಂಜುನಾಥ್ ಎಂ ವಿ, ಡಿ ದರ್ಜೆ ನೌಕರರಾದ ಕಲ್ಪನಾ ಪಿ, ಮಂಜುನಾಥ್, ಶೋಭಾ ಎನ್, ಪ್ರವೀಣ್, ಮುನಿರಾಜು, ಮಂಜುಳಮ್ಮ ಮತ್ತು ಮೀನಾಕ್ಷಿ ಅವರುಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಈ ಪ್ರದೇಶದ ಸರ್ಕಾರಿ ಜಮೀನುಗಳ ಮೂಲ ಮಂಜೂರಾತಿ ಕಡತಗಳು, ದರಖಾಸ್ತು ವಹಿ, ಸಾಗುವಳಿ ಚೀಟಿಗಳು, ಸಾಗುವಳಿ ಚೀಟಿ ವಿತರಣಾ ವಹಿ, ಮಂಜೂರಿ ನಡವಳಿ ವಹಿ, ಇನಾಂ ಡಿಸಿ ಆದೇಶದ ಕಡತಗಳು, ಭೂ ಸುಧಾರಣೆ (LRF) ಮೂಲ ಕಡತಗಳು, ಐ.ಎಲ್. ಆರ್.ಆರ್ ವಹಿಗಳು, ಖೇತುವಾರು, ಸೂಡು ಪಹಣಿಗಳು, ಕೈಬರಹ ಪಹಣಿಗಳು ಹಾಗೂ ಇತರೆ ದಾಖಲೆಗಳಲ್ಲಿ ತೊಟ್ಟಿ (ನಕಲಿ) ದಾಖಲಾತಿಗಳನ್ನು ಸೇರಿಸಿ ಭೂಗಳ್ಳರಿಗೆ ಸರ್ಕಾರಿ ಜಮೀನನ್ನು ಕಬಳಿಸಲು ಸಹಕಾರ ಮಾಡಿರುವುದು ಭೂಸುರಕ್ಷಾ ಯೋಜನೆಯಡಿಯಲ್ಲಿ ದಾಖಲಾತಿಗಳನ್ನು ಸ್ಕ್ಯಾನ್ ಮಾಡುವ ಸಂದರ್ಭದಲ್ಲಿ ಕಂಡುಬಂದಿರುತ್ತದೆ ಎಂದು ತಹಶೀಲ್ದಾರ್, ಆನೇಕಲ್ ರವರು ವರದಿ ಮಾಡಿದ್ದರು.

ಈ ಕುರಿತು ಮರು ಪರಿಶೀಲಿಸಲಾಗಿ, ತೊಟ್ಟಿ (ನಕಲಿ) ದಾಖಲಾತಿಗಳೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಕಳೆದ 5 ವರ್ಷ ಹಿಂದಿನಿಂದ ಅಭಿಲೇಖಾಲಯದಲ್ಲಿ ಕೆಲಸ ನಿರ್ವಹಿಸಿದಂತಹ ಒಟ್ಟು 16 ಸರ್ಕಾರಿ ನೌಕರರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಈ ತೊಟ್ಟಿ ದಾಖಲಾತಿಗಳನ್ನು ಸೃಷ್ಟಿ ಮಾಡುವಲ್ಲಿ ಖಾಸಗಿ ವ್ಯಕ್ತಿಗಳು ಸಹಕಾರ ಮಾಡುತ್ತಿರುವ ಬಗ್ಗೆ ಹಾಗೂ ತೊಟ್ಟಿ ದಾಖಲೆಗಳನ್ನು ಸೃಷ್ಟಿ ಮಾಡುವಂತಹ ವ್ಯವಸ್ಥಿತ ಗುಂಪುಗಳ ಮೇಲೆಯೂ ಸಹ ವಿಚಾರಣೆ ಕೈಗೊಂಡು ಅವರ ಮೇಲೆಯೂ ಸಹ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ತಹಶೀಲ್ದಾರ್ ಆನೇಕಲ್ ರವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಅಲ್ಲದೇ, ಸರ್ಕಾರಿ ಜಮೀನುಗಳ ಬಗ್ಗೆ ಕಂದಾಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ರೀತಿಯ ಆದೇಶಗಳನ್ನು, ಖಾತೆ ಮಾಡುವ ಸಮಯದಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ಖಾತೆ ಮಾಡಲು ಜಿಲ್ಲೆಯ ಎಲ್ಲ ವಿಶೇಷ ತಹಶೀಲ್ದಾರ್ ರವರಿಗೆ ಈಗಾಗಲೇ ಸೂಚಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಆನೇಕಲ್ ತಾಲ್ಲೂಕಿನಲ್ಲಿರುವ ಸರ್ಕಾರಿ ಜಮೀನುಗಳಿಗೆ ಸಂಬಂಧಿಸಿದಂತೆ ಖಾತೆ ಬದಲಾವಣೆ/ಮ್ಯೂಟೇಷನ್‌ಗಳಾಗಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಲು ಅನೇಕಲ್ ತಹಶೀಲ್ದಾರರಿಗೆ ಸೂಚಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಎಫ್ ಐ ಆರ್
Add as Preferred on Google Follow on Google News
Share. WhatsApp Facebook Twitter Telegram
Previous Articleಶ್ರೀಲಂಕಾದಲ್ಲಿ ಅಬ್ಬರಿಸುತ್ತಿರುವ ದಿತ್ವಾ ಚಂಡಮಾರುತ
Next Article ಮಾಹಿತಿ ನೀಡದೆ ಕಳ್ಳಾಟವಾಡುತ್ತಿದ್ದ ಎಸಿ ತಹಸಿಲ್ದಾರ್ ಗಳಿಗೆ ದಂಡ ಹಾಕಿದ ಆಯೋಗ.
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

September 2, 2026

ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row

June 15, 2026

ಐಎಎಸ್ ಬಡ್ತಿ ವಿವಾದ: ಅನರ್ಹ 7 ಅಧಿಕಾರಿಗಳ ಮುಂದುವರಿಕೆ ವಿರೋಧಿಸಿ 25 ಕೆಎಎಸ್ ಅಧಿಕಾರಿಗಳ ಬಂಡಾಯ, ಅಖಾಡಕ್ಕಿಳಿದ ಡಿಕೆಶಿ

May 23, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.