BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

, ,

ನಟ ದರ್ಶನ್ ಗೆ ಬಿಗ್ ಶಾಕ್: ಸದ್ಯಕ್ಕಿಲ್ಲ ಜಾಮೀನು

Author Picture
Published On: May 15, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದ್ದು, ವಿಚಾರಣಾ ನ್ಯಾಯಾಲಯವು ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ಪ್ರಕರಣವನ್ನು ತೀರ್ಮಾನಿಸಬೇಕೆಂದು ಆದೇಶ ನೀಡಿದೆ.

ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ನೇತೃತ್ವದ ಇಬ್ಬರು ನ್ಯಾಯಮೂರ್ತಿಗಳ ಪೀಠ ಈ ಆದೇಶ ನೀಡಿದ್ದು, ಇಂದಿನಿಂದಲೇ ವಿಚಾರಣೆಯನ್ನು ಆದ್ಯತೆಯ ಮೇರೆಗೆ ನಡೆಸಬೇಕು ಎಂದು ಹೇಳಿದೆ.

ಜೈಲಿನಲ್ಲಿ ಇತರ ಕೈದಿಗಳಿಗೆ ನೀಡಲಾಗುವಂತೆ ದರ್ಶನ್ ಅವರಿಗೆ ಸಹ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಒಂದು ವರ್ಷದವರೆಗೆ ಅರ್ಜಿ ಸಲ್ಲಿಕೆ ಇಲ್ಲ

ಮುಂದಿನ ಒಂದು ವರ್ಷದವರೆಗೆ ದರ್ಶನ್ ಯಾವುದೇ ಜಾಮೀನು ಅರ್ಜಿ ಸಲ್ಲಿಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ. ಆದರೆ ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳ್ಳದಿದ್ದರೆ, ಆ ಬಳಿಕ ಅವರಿಗೆ ಜಾಮೀನು ಪರಿಗಣಿಸಬಹುದು ಎಂದು ಹೇಳಿದೆ.

ಹಿಂದಿನ ವಿಚಾರಣೆಗಳಲ್ಲಿ, ಜೈಲಿನಲ್ಲಿನ ಅಕ್ರಮಗಳು ಹಾಗೂ ಸಹ ಕೈದಿಗಳಿಂದ ಕಿರುಕುಳ ಮತ್ತು ಬೆದರಿಕೆ ಎದುರಿಸುತ್ತಿರುವುದಾಗಿ ದರ್ಶನ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಇದಾದ ಬಳಿಕ ನ್ಯಾಯಾಲಯ ಜೈಲು ಅಧಿಕಾರಿಗಳಿಂದ ವರದಿ ಕೇಳಿತ್ತು.

ವಿಶೇಷ ಸರ್ಕಾರಿ ಅಭಿಯೋಜಕರು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿ, ದರ್ಶನ್ ಮಾಡಿದ್ದ ಎಲ್ಲ ಆರೋಪಗಳನ್ನು ವಿಡಿಯೋ ಸಾಕ್ಷ್ಯಗಳೊಂದಿಗೆ ತಳ್ಳಿಹಾಕಿದ್ದರು.

ವಿಚಾರಣೆ ವೇಳೆ, ಪ್ರಕರಣದಲ್ಲಿರುವ 270 ಸಾಕ್ಷಿದಾರರಲ್ಲಿ ಇದುವರೆಗೆ ಕೇವಲ 10 ಮಂದಿಯಷ್ಟೇ ವಿಚಾರಣೆಗೆ ಒಳಪಟ್ಟಿದ್ದಾರೆ ಎಂಬುದೂ ಗಮನಕ್ಕೆ ಬಂತು. ವಿಚಾರಣೆಯಲ್ಲಿ ವಿಳಂಬವಾಗುತ್ತಿರುವ ಕಾರಣ, ಉಳಿದ ಸಾಕ್ಷಿದಾರರ ವಿಚಾರಣೆ ಮುಗಿಯುವವರೆಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ದರ್ಶನ್ ಮನವಿ ಮಾಡಿದ್ದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp