Updated By: Priyalachhi

ಬೆಂಗಳೂರು: ನರೇಗಾದಂತಹ ಜನಪರ ಯೋಜನೆಯನ್ನು ಮರುಸ್ಥಾಪಿಸಲು ಜನಾಗ್ರಹದ ಒತ್ತಡ ಅತ್ಯಗತ್ಯವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MNREGA)ಯ ಹೆಸರನ್ನು ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಯೋಜನೆಗೆ ಪ್ರಿಯಾಂಕ್ ಖರ್ಗೆಯವರು ವಿರೋಧ ವ್ಯಕ್ತಪಡಿಸಿದ್ದಾರೆ.

ಭೂ ರಹಿತ ಕಾರ್ಮಿಕರಿಗೆ ಉದ್ಯೋಗ ಮತ್ತು ಸಂಪಾದನೆಯ ಭರವಸೆಯನ್ನು ನೀಡುವುದರೊಂದಿಗೆ ಸಣ್ಣ, ಅತಿ ಸಣ್ಣ ರೈತರು ಹೊಸ ಕೃಷಿ ಚಟುವಟಿಕೆಗಳಿಗೂ ನೆರವಾಗಿದೆ, ಅಲ್ಲದೆ ಉಪ ಕಸುಬುಗಳನ್ನು ಕೈಗೊಳ್ಳಲು ನೆರವಾಗುವ ಮೂಲಕ ಹೆಚ್ಚುವರಿ ಆದಾಯಕ್ಕೆ ದಾರಿ ಮಾಡಿಕೊಟ್ಟಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಲಿನಜೂಗಾನಹಳ್ಳಿ ಗ್ರಾಮ ಪಂಚಾಯಿತಿಯ ತುರುವನಹಳ್ಳಿ ಗ್ರಾಮದ ಅಂಬರೀಶ್ ಅವರು ನರೇಗಾ ಯೋಜನೆಯಡಿ ₹70,000 ಆರ್ಥಿಕ ನೆರವು ಪಡೆದು ಸುಸಜ್ಜಿತ ಕುರಿ ಶೆಡ್ ನಿರ್ಮಿಸಿಕೊಂಡು ಉತ್ತಮ ಆದಾಯ ಪಡೆಯುತ್ತಿದ್ದಾರೆ.

ಹೀಗೆ ಬಹು ಆಯಾಮದಲ್ಲಿ ಗ್ರಾಮೀಣ ಜನರ ಬದುಕನ್ನು ಸದೃಢಗೊಳಿಸುತ್ತಿರುವ ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಬಂದ್ ಮಾಡಿದೆ, ಬದಲಾದ ಯೋಜನೆಯು ಗ್ರಾಮೀಣ ಜನರ ಭರವಸೆಯನ್ನು ಅತಂತ್ರಗೊಳಿಸಿದೆ. ಹೀಗಾಗಿ ನರೇಗಾದಂತಹ ಜನಪರ ಯೋಜನೆಯನ್ನು ಮರುಸ್ಥಾಪಿಸಲು ಜನಾಗ್ರಹದ ಒತ್ತಡ ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version