Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನರೇಗಾ ಮೇಲಿನ ಚರ್ಚೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಶಾಸಕರಿಗೆ ಸಿಎಂ ಸೂಚನೆ
Politics

ನರೇಗಾ ಮೇಲಿನ ಚರ್ಚೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಶಾಸಕರಿಗೆ ಸಿಎಂ ಸೂಚನೆ

Sambrama Prabha NewsBy Sambrama Prabha NewsJanuary 29, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಸದನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ನರೇಗಾ ಮೇಲಿನ ಚರ್ಚೆ ವೇಳೆ ಪ್ರತಿಯೊಬ್ಬ ಶಾಸಕರೂ ಅರ್ಥಪೂರ್ಣವಾಗಿ ಪಾಲ್ಗೊಂಡು, ವಿಷಯ ಮಂಡನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ಖಾಸಗಿ ಹೋಟೆಲ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು.

ಎರಡು ದಿನ ಸದನ ವಿಸ್ತರಣೆಗೆ ಸಿಎಂ ಒಲವು: ಸಭೆಯಲ್ಲಿ ನರೇಗಾ ಬಗ್ಗೆ ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ, ಎರಡು ದಿನಗಳ ಕಾಲ ಸದನ ವಿಸ್ತರಣೆಗೆ ಒಲವು ತೋರಿದ್ದಾರೆ ಎಂದು ಹೇಳಲಾಗಿದೆ. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ ನರೇಗಾ ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಸೋಮವಾರ, ಮಂಗಳವಾರ ನರೇಗಾ ಚರ್ಚೆಗಾಗಿಯೇ ಅಧಿವೇಶನ ವಿಸ್ತರಿಸೋಣ. ಬಿಎಸಿ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ನಿರ್ಣಯಿಸುತ್ತೇವೆ. ಅಧಿವೇಶನ ವಿಸ್ತರಣೆಯಾದರೆ ಕಡ್ಡಾಯವಾಗಿ ಭಾಗಿಯಾಗಬೇಕು ಎಂದು ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ಸಚಿವರು ರಾಜೀನಾಮೆ ನೀಡುವ ಅಗತ್ಯ ಇಲ್ಲ. ಯಾರೋ ಅಧಿಕಾರಿ ಹೇಳಿದ್ದಾರೆ. ಹಾಗಾಗಿ ಆರೋಪ ಹೊರಿಸಿ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ದನಕ್ಕೆ ಗೈರಾಗುವ ಸಚಿವರ ಬಗ್ಗೆ ಸಿಎಂ ಬೇಸರ: ಇದೇ ವೇಳೆ, ಸದನಕ್ಕೆ ಸಚಿವರು ಗೈರಾಗುವುದಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ನಮ್ಮ ಮಂತ್ರಿಗಳೇ ಇರುವುದಿಲ್ಲ. ಮಂತ್ರಿಗಳು ತಪ್ಪದೇ ಹಾಜರಾಗಬೇಕು. ಸಚಿವರಿಲ್ಲ ಎಂದು ಪ್ರತಿಪಕ್ಷದವರು ಗಲಾಟೆ ಮಾಡುತ್ತಾರೆ. ಇದು ಆಗದಂತೆ ನೋಡಿಕೊಳ್ಳಬೇಕು‌. ಅಧಿವೇಶನ ನಡೆಯುವಾಗ ಸಚಿವರು ಅಧಿಕೃತ ಸಭೆಗಳನ್ನು ನಡೆಸಬಾರದೆಂದು ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇನ್ಸ್​ಪೆಕ್ಟರ್​​ಗಳ ವರ್ಗಾವಣೆ ಮಾಡದ ಬಗ್ಗೆ ಆಕ್ಷೇಪ: ಸಭೆಯಲ್ಲಿ ಶಾಸಕರುಗಳು ಪೊಲೀಸ್ ಇನ್ಸ್​ಪೆಕ್ಟರ್​​ಗಳ ವರ್ಗಾವಣೆ ಮಾಡದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇನ್ಸ್​ಪೆಕ್ಟರ್​​ಗಳ ವರ್ಗಾವಣೆಗೆ ಮನವಿ ಪತ್ರ ನೀಡಿ ಹಲವು ತಿಂಗಳುಗಳೇ ಕಳೆದಿವೆ. ಇದೂವರೆಗೂ ನಮ್ಮ ಪತ್ರಗಳಿಗೆ ಮಾನ್ಯತೆಯನ್ನೇ ನೀಡಿಲ್ಲ. ಈಗಾಗಲೇ ಇನ್ಸ್​ಪೆಕ್ಟರ್​​ಗಳ ವರ್ಗಾವಣೆ ಅವಧಿ ಮುಗಿದು ಐದಾರು ತಿಂಗಳೇ ಕಳೆದಿದೆ. ಎರಡು ವರ್ಷಗಳ ಅವಧಿ ಮುಗಿದರೂ ಒಂದೇ ಸ್ಥಳದಲ್ಲಿ ಮುಂದುವರೆದಿದ್ದಾರೆ. ಇದನ್ನು ಒಂದು ವರ್ಷಕ್ಕೆ ಸೀಮಿತಗೊಳಿಸಿ. ವರ್ಗಾವಣೆಯನ್ನು ಎರಡು ವರ್ಷಗಳ ಬದಲಿಗೆ ಒಂದು ವರ್ಷಕ್ಕೆ ಸೀಮಿತಗೊಳಿಸಿ ಎಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.‌

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ನರೇಗಾ ಸಿಎಂ
Add as Preferred on Google Follow on Google News
Share. WhatsApp Facebook Twitter Telegram
Previous ArticleAjit Pawar: ಇಂದು ಮಧ್ಯಾಹ್ನ ಬಾರಾಮತಿಯಲ್ಲಿ ಅಂತ್ಯಕ್ರಿಯೆ
Next Article ಪ್ರಸಕ್ತ ನಿಗಮ, ಮಂಡಳಿ ಅಧ್ಯಕ್ಷರ ಪದಾವಧಿಯನ್ನು ಮುಂದುವರೆಸಿ ರಾಜ್ಯ ಸರ್ಕಾರ ಆದೇಶಿಸಿದೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

September 19, 2026

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.