Updated By: Priyalachhi 

ಬೆಂಗಳೂರು: ನಾನೂ ಕೂಡ ಒಬಿಸಿ ವರ್ಗಕ್ಕೆ ಸೇರಿದವನೇ… ಒಕ್ಕಲಿಗ ಸಮುದಾಯ ಒಬಿಸಿಗೆ ಸೇರಿದ್ದಲ್ಲವೇ? ಎಂದು ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಭಾನುವಾರ ಪ್ರಶ್ನಿಸಿದ್ದು, ಈ ಮೂಲಕ ಸಿದ್ದರಾಮಯ್ಯ ಮಾತ್ರ ಹಿಂದುಳಿದ ನಾಯರಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರರು, “ನಾನು ಕೂಡ ಒಬಿಸಿ ಎಂದು ನಿಮಗೆ ತಿಳಿದಿದೆಯೇ; ಒಕ್ಕಲಿಗ ಒಬಿಸಿ ಅಲ್ಲವೇ? ಲಿಂಗಾಯತರು ಒಬಿಸಿ, ಆದಾಯವಿಲ್ಲದ ಬ್ರಾಹ್ಮಣರು ಒಬಿಸಿಗೆ ಸೇರಿದವರಾಗಿದ್ದಾರೆಂದು ಹೇಳಿದರು.

ಇದೇ ವೇಳೆ ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿ ಬರುವ ಐದು ನಿಗಮಗಳಿಗೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ಬಯಸುವ ಆಕಾಂಕ್ಷಿಗಳಿಂದ ಪಕ್ಷವು ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗೆ ಸೂಚನೆ

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ. ಹೀಗಾಗಿ ಮೀಸಲಾತಿ ಹಾಗೂ ನ್ಯಾಯಾಲಯದಲ್ಲಿರುವ ತಗಾದೆಗಳನ್ನು ಎರಡು ಮೂರು ತಿಂಗಳ ಒಳಗಾಗಿ ಇತ್ಯರ್ಥಪಡಿಸಿ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಅದೇ ಸಂದರ್ಭದಲ್ಲಿ ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿನ 5 ಪಾಲಿಕೆಗಳ 369 ವಾರ್ಡ್‌ಗಳ ಸದಸ್ಯರ ಆಯ್ಕೆಗೂ ಚುನಾವಣೆ ನಡೆಯಲಿದೆ ಎಂದು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version