Updated By: Priyalachhi 

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಳವಾರ, ಜನವರಿ 6 ರಂದು ವಿಶಿಷ್ಠ ದಾಖಲೆ ಬರೆಯಲು ಸಿದ್ಧರಾಗಿದ್ದಾರೆ.

ಅತಿ ಹೆಚ್ಚು ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿರುವ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಸರಿಗಟ್ಟಲಿದ್ದು, ಈ ಮೂಲಕ 7 ವರ್ಷ 239 ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲಿದ್ದಾರೆ.

ಸಿದ್ದರಾಮಯ್ಯ ಅವರು 2013-2018ರ ಅವಧಿಯಲ್ಲಿ ಮೊದಲ ಬಾರಿಗೆ ಸಿಎಂ ಆಗಿದ್ದಾಗ 1,829 ದಿನಗಳ ಕಾಲ ಅಧಿಕಾರದಲ್ಲಿದ್ದರು. ಈಗ ಎರಡನೇ ಅವಧಿಗೆ ಆಡಳಿತದ ಸೂತ್ರ ಹಿಡಿದಿರುವ ಅವರು, ಜನವರಿ 6ರಂದು ದೇವರಾಜ ಅರಸರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version