BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ನಾವು ಜನರ ಸೇವೆ ಮಾಡಲು ಸಿಎಂ ಆಗುವುದು: ಡಿ.ಕೆ ಶಿವಕುಮಾರ್

Author Picture
Published On: January 27, 2026

—Advertisement—

Updated By: Priyalachhi

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ, ಸರ್ಕಾರಿ ಕಚೇರಿಗಳಲ್ಲಿ ದೇಶದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಮುಂದಿನ ಪೀಳಿಗೆಗೆ ಕೂಡ ಉಳಿಸಿ ಬೆಳೆಸಿಕೊಂಡು ಹೋಗಲು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇವತ್ತು ಪ್ರತಿ ಹಂತದಲ್ಲಿ ಸಂವಿಧಾನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರದಿಂದ ಗ್ರಾಮೀಣ ಬಡವರ ಉದ್ಯೋಗ ಖಾತ್ರಿ ಯೋಜನೆಗೆ ತೊಂದರೆಯಾಗಿರುವುದು ನಮಗೆಲ್ಲಾ ಅಚ್ಚರಿ ತಂದಿದೆ.

ಇದರ ವಿರುದ್ಧ ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಹಮ್ಮಿಕೊಂಡಿದೆ. ನಾಳೆ ಬೆಳಗ್ಗೆ ರಾಜಭವನಕ್ಕೆ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಂತರ ಪ್ರತಿ ತಾಲ್ಲೂಕಿನಲ್ಲಿ 5 ಕಿಲೋ ಮೀಟರ್ ಉದ್ದ ಪಾದಯಾತ್ರೆ ಹಮ್ಮಿಕೊಂಡು ಪ್ರತಿ ಪಂಚಾಯತಿಯಲ್ಲಿ ಹೋರಾಟ ಮಾಡುತ್ತೇವೆ, ಇದಕ್ಕೆ ಪ್ರಜಾ ಪ್ರತಿನಿಧಿಗಳಿಗೆ, ಪಂಚಾಯತ್ ಸದಸ್ಯರಿಗೆ ಮತ್ತು ಮುಖಂಡರುಗಳಿಗೆ ನಿರ್ದೇಶನ ನೀಡಿದ್ದೇವೆ ಎಂದರು.


'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp