Updated By: Priyalachhi

ಬೆಂಗಳೂರು: ನಿಗದಿತವಾಗಿ ಗೊತ್ತುಪಡಿಸಿದ ಸ್ಥಳ (ರುದ್ರಭೂಮಿ) ಹೊರತುಪಡಿಸಿ ಇತರೆ ಜಾಗಗಳಲ್ಲಿ ಅನುಮತಿ ಇಲ್ಲದೆ ಮೃತದೇಹಗಳನ್ನು ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಇಂದು ಮೌಖಿಕವಾಗಿ ತಿಳಿಸಿದೆ.

ತಮ್ಮ ಒಪ್ಪಿಗೆಯಿಲ್ಲದೆ ಸೊಸೆಯ ಶವವನ್ನು ಮನೆಯ ಬಳಿ ಹೂಳಲಾಗಿದ್ದು, ಸಮಾಧಿ ಬೇರೆಡೆಗೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಬಂಗಾರಪೇಟೆಯ ತುರಾಂಡಹಳ್ಳಿಯ ಹೆಚ್‌.ಗೋಪಾಲಗೌಡ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಮೃತದೇಹಗಳನ್ನು ಎಲ್ಲೆಂದರಲ್ಲಿ ಸಮಾಧಿ ಮಾಡುವುದು ಅತ್ಯಂತ ಸೂಕ್ಷ್ಮ ವಿಷಯ. ಈ ಪ್ರಕರಣ ಒಂದು ಶವ ಸಮಾಧಿ ಮಾಡುವುದು ಮಾತ್ರವಲ್ಲ, ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡಿದಲ್ಲಿ ಗಂಭೀರ ಪರಿಣಾಮ ಎದುರಾಗುತ್ತದೆ. ಎಲ್ಲೆಂದರಲ್ಲಿ ಸಮಾಧಿ ಮಾಡುವುದಕ್ಕೆ ಅವಕಾಶ ಸಿಕ್ಕಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದೆ.

ನಿಗದಿತ ಸ್ಥಳ (ರುದ್ರಭೂಮಿ)ದಲ್ಲಿ ಹೊರತುಪಡಿಸಿ ಬೇರೆ ಸ್ಥಳದಲ್ಲಿ ಶವ ಹೂಳಲು ಅವಕಾಶವಿಲ್ಲ. ಇದಕ್ಕೆ ಅವಕಾಶ ನೀಡಿದಲ್ಲಿ ಮುಂದೊಂದಿನ ಕೊಲೆ ಪ್ರಕರಣಗಳಲ್ಲಿಯೂ ಮುಂದುವರೆಯುವ ಸಾಧ್ಯತೆ ಇರುತ್ತದೆ. ಇದರಿಂದ ಎದುರಾಗುವ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಬೇಕು. ಇಂತಹ ಕೃತ್ಯಗಳಿಗೆ ಅನುಮತಿ ನೀಡಿದಲ್ಲಿ ಬೇರೊಬ್ಬ ವ್ಯಕ್ತಿ ಮತ್ತೊಬ್ಬರ ಆಸ್ತಿಯಲ್ಲಿ ಶವ ಹೂಳುವುದಕ್ಕೆ ಕಾರಣವಾಗಬಹುದು. ಆದ್ದರಿಂದ ಗೊತ್ತುಪಡಿಸಿದ ಸ್ಮಶಾನದಲ್ಲಿ ಮಾತ್ರ ದಹನ ಮಾಡಬೇಕು. ಅದನ್ನು ಹೊರತುಪಡಿಸಿ ಇತರೆಡೆ ಅಂತ್ಯಕ್ರಿಯೆ ಮಾಡುವುದಕ್ಕೆ ಅವಕಾಶವಿಲ್ಲ ಎಂದಿತು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version